ಕಲೋತ್ಸವದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

11
Published on

ಮೈಸೂರು: ಪ್ರತಿ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಅಡಗಿರುತ್ತದೆ. ಅದನ್ನು ಅನಾವರಣಗೊಳಿಸುವುದು ಮುಖ್ಯ ಎಂದು ಮೈಸೂರು ನಗರ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಶಾರದಾ ವಿಲಾಸ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮೈಸೂರು ದಕ್ಷಿಣ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉದ್ಘಾಟಿಸಿ ಮಾತನಾಡಿದರು.
ಪ್ರತಿಭಾ ಕಾರಂಜಿ ವಿನೂತ ಪರಿಕಲ್ಪನೆಯ ಕಾರ್ಯಕ್ರಮವಾಗಿದ್ದು, ಸರ್ಕಾರದಿಂದ 20 ವರ್ಷಗಳಿಂದಲೂ ನಿರಂತರವಾಗಿ ನಡೆದುಕೊಂಡು ಬಂದಿದೆ. ಶಾಲಾ ಪಠ್ಯೇತರ ಚಟುವಟಿಕೆಯ ಒಂದು ಭಾಗವಾಗಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಈ ಕಾರ್ಯಕ್ರಮ ಪ್ರೇರಕ ಶಕ್ತಿಯಾಗಿದೆ. ಎಲ್ಲ್ಲ ವಿದ್ಯಾರ್ಥಿಗಳು ಸಂತಸದಿಂದ ಸಕ್ರಿಯವಾಗಿ ಭಾಗವಹಿಸಬೇಕು. ನಮ್ಮ ವಲಯದ ಮಕ್ಕಳು ಜಿಲ್ಲಾ, ರಾಜ್ಯ ಮಟ್ಟಕ್ಕೆ ತಲುಪಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಯಶಸ್ಸು ಗಳಿಸಲಿ ಎಂದು ಆಶಿಸಿದರು.
ಬಿಆರ್‌ಸಿ ಶ್ರೀಕಂಠಸ್ವಾಮಿ, ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ನಾಗರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹರ್ಷ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಂಗೇಶ್, ಪದಾಧಿಕಾರಿಗಳಾದ ನಾಗಸುಂದರ್, ಜಯರಾಂ ಭಟ್, ಶಿಕ್ಷಣ ಸಂಯೋಜಕರಾದ ಮನೋಹರ್, ಕುಮಾರ್, ಲಿಂಗರಾಜು, ಬಿಆರ್‌ಪಿ ಶ್ರೀಕಂಠ ಶಾಸ್ತ್ರಿ, ಮಲ್ಲಿಕಾರ್ಜುನ, ರಾಜಮ್ಮ, ಸಿಆರ್‌ಪಿ ಮಣಿಕಂಠ, ಮುಖ್ಯ ಶಿಕ್ಷಕರಾದ ನಂಜರಾಜು, ವಿಶಾಲಾಕ್ಷಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net