ಶಾಲೆ ಅಭಿವೃದ್ಧಿಗೆ ವಿದ್ಯಾಭಿಮಾನಿಗಳ ಸಹಕಾರ

logo
ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಲೋಗೋ ಅನಾವರಣ ನಡೆಯಿತು.
Published on

ಗಂಗೊಳ್ಳಿ: ಶಾಲೆ ಅಭಿವೃದ್ಧಿಗೆ ಗ್ರಾಮಸ್ಥರು ಹಾಗೂ ವಿದ್ಯಾಭಿಮಾನಿಗಳು ಕೈಜೋಡಿಸಬೇಕು ಎಂದು ಇಸ್ರೋ ನಿವೃತ್ತ ವಿಜ್ಞಾನಿ ಸುರೇಶ ಕರ್ಣಿಕ್ ಹೇಳಿದರು. ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವದ ಲೋಗೋ ಅನಾವರಣ ಕಾರ್ಯಕ್ರಮ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ್ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ದಿವಾಕರ ಖಾರ್ವಿ ಲೋಗೋ ಅನಾವರಣಗೊಳಿಸಿದರು. ನಿವೃತ್ತ ಆಡಿಟರ್ ಕೇಶವ್ ಪ್ರಕಾಶ್, ಕೊಲ್ಲೂರು ನಾಗರಾಜ್ ಖಾರ್ವಿ, ಕುಂದಾಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಸಂಪನ್ಮೂಲ ವ್ಯಕ್ತಿ ಸಂತೋಷ್ ಕುಮಾರ್ ಶೆಟ್ಟಿ, ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ, ಸಹ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಸಹಶಿಕ್ಷಕಿ ಉಷಾ ಕುಮಾರಿ ಸ್ವಾಗತಿಸಿದರು. ಅನುಷಾ ಸಿ. ಬಂಗೇರ ವಂದಿಸಿದರು. ಸಹಶಿಕ್ಷಕ ಶಶಿಶಂಕರ ಎಚ್.ಎಂ. ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net