ಅನಗತ್ಯ ಸಂಚರಿಸುತ್ತಿದ್ದವರ 21 ಬೈಕ್ ವಶಕ್ಕೆ

24032020 Koppal Covid -19 police lati
Published on

ಬೆಳಗಾವಿ: ಲಾಕ್‌ಡೌನ್ ಉಲ್ಲಂಘಿಸಿ ನಗರದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದವರ 21 ಬೈಕ್‌ಗಳನ್ನು ನಗರ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಕರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಸೇವೆಗಳ ವಾಹನಗಳನ್ನು ಹೊರತುಪಡಿಸಿ ಇನ್ನಿತರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆದರೂ ನಗರದಲ್ಲಿ ಔಷಧ, ತರಕಾರಿ ತರುವ ನೆಪ ಹೇಳಿಕೊಂಡು ಅನಗತ್ಯವಾಗಿ ಸಂಚರಿಸುತ್ತಿದ್ದ ಬೈಕ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಈಗಾಗಲೇ ಜಿಲ್ಲೆಯಲ್ಲಿ ಏಳು ಜನರಿಗೆ ಕರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಗರದ ಕ್ಯಾಂಪ್ ಪ್ರದೇಶ ಸೇರಿದಂತೆ ಕೆಲ ಮಾರ್ಗಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಆದರೂ, ಕೆಲವರು ಸುಖಾಸುಮ್ಮನೆ ಬೈಕ್ ಮೇಲೆ ಸಂಚರಿಸುತ್ತಿದ್ದಾರೆ. ಅಂತಹವರ
ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ ಎಂದು ಮಹಾನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net