

ಗೋಕಾಕ: ಉತ್ತರಪ್ರದೇಶದ ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ ವಿರೋಧಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಉತ್ತರ ಪ್ರದೇಶ ಸರ್ಕಾರ ವಿರುದ್ಧ ಪಟ್ಟಣದಲ್ಲಿ ಭಾನುವಾರ ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯಿತು.
ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಉತ್ತರಪ್ರದೇಶ ಸರ್ಕಾರದ, ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು. ರಾಹುಲ್ ಜಾರಕಿಹೊಳಿ, ಪ್ರಿಯಾಂಕಾ ಜಾರಕಿಹೊಳಿ, ವಿವೇಕ ಜತ್ತಿ, ಜಯಶ್ರೀ ಮಾಳಗಿ, ಆಯೇಶಾ ಸನದಿ, ಕಲ್ಪನಾ ಜೋಶಿ, ರಿಯಾಜ್ ಚೌಗಲಾ, ಮಹಾಂತೇಶ ಮಗದುಮ್, ಮುನ್ನಾ ಖತೀಭ, ಪ್ರಕಾಶ ಡಾಂಗೆ, ಸಂಜಯ ಮಾಡಲಗಿ ಇತರರು ಇದ್ದರು.