ಕೆಎಸ್‌ಆರ್‌ಟಿಸಿಗೆ ಭೇಟಿ ನೀಡಿದ ಯುಪಿ ಸಾರಿಗೆ ಅಧಿಕಾರಿಗಳು

ksrtc
Published on


ಬೆಂಗಳೂರು: ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆಎಸ್‌ಆರ್‌ಟಿಸಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ.
ಕೆಎಸ್‌ಆರ್‌ಟಿಸಿಯಲ್ಲಿ ಅನುಷ್ಠಾನಗೊಳಿಸಲಾಗಿರುವ ಯೋಜನೆಗಳ ಬಗ್ಗೆ ಉತ್ತರ ಪ್ರದೇಶದ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕಿ ಅನ್ನಪೂರ್ಣ ಗರ್ಗ್ ನೇತೃತ್ವದಲ್ಲಿ ಅಧಿಕಾರಿಗಳು ಅಧ್ಯಯನ ಕೈಗೊಂಡಿದ್ದಾರೆ. ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-೪, ಪ್ರಾದೇಶಿಕ ಕಾರ್ಯಾಗಾರ, ಕೆಂಗೇರಿ, ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದ ನಿಯಂತ್ರಣ ಕೊಠಡಿಗಳಿಗೆ ಭೇಟಿ ನೀಡಿದ್ದರು.
ವಾಹನಗಳ ತಾಂತ್ರಿಕ ನಿರ್ವಹಣೆ, ಕಾರ್ಯಾಚರಣೆ, ಡ್ಯೂಟಿ ರೋಟಾ ವ್ಯವಸ್ಥೆ, ಮುಂಗಡ ಆಸನ ಕಾಯ್ದಿರಿಸುವಿಕೆ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಕ್ರಮಗಳು, ಮಾಹಿತಿ ತಂತ್ರಜ್ಞಾನ ಉಪಕ್ರಮಗಳು, ಬಸ್ ನಿಲ್ದಾಣ, ಘಟಕಗಳ ಕಾಮಗಾರಿ ಪದ್ಧತಿ, ಬಸ್‌ಗಳ ಬ್ರ್ಯಾಂಡಿಂಗ್, ಪುನಶ್ಚೇತನ ಕಾರ್ಯ, ಬಸ್ ನಿಲ್ದಾಣದ ಸ್ವಚ್ಛತೆ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ನಿರ್ದೇಶಕ ಸುಂದರೇಶ್ ಬಾಬು, ಮುಖ್ಯ ಪ್ರಧಾನ ವ್ಯವಸ್ಥಾಪಕ ಆರ್.ಎನ್.ವರ್ಮ (ತಾಂತ್ರಿಕ), ಸಲಹೆಗಾರ ಅತುಲ್ ಜೈನ್ (ಕಾರ್ಯಾಚರಣೆ) ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net