ಬಾಳೆಹೊನ್ನೂರು ಪಿಎಚ್‌ಸಿ ಮೇಲ್ದರ್ಜೆಗೇರಿಸಿ

g r manavi
ಬಾಳೆಹೊನ್ನೂರಿನಲ್ಲಿ ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಸದಾಶಿವ ಆಚಾರ್ಯ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಮನವಿ ಸಲ್ಲಿಸಿದರು. ಮಹಮ್ಮದ್ ಹನ್ೀ, ಎಂ.ಎಸ್.ಜಯಪ್ರಕಾಶ್ ಇತರರಿದ್ದರು.
Published on

ಬಾಳೆಹೊನ್ನೂರು: ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ಬಿ.ಕಣಬೂರು ಗ್ರಾಪಂನಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಲಾಯಿತು.

ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವ ಭೇಟಿ ನೀಡಿದ ವೇಳೆ ಗ್ರಾಪಂ ಅಧ್ಯಕ್ಷ ಸದಾಶಿವ ಆಚಾರ್ಯ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನ್ೀ ಇತರರು ಮನವಿ ಸಲ್ಲಿಸಿದರು. ಪಟ್ಟಣ ಪ್ರವಾಸಿ ತಾಣಗಳಿಗೆ ಕೇಂದ್ರ ಸ್ಥಾನವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 20 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಆದರೆ ಇಲ್ಲಿ ಇನ್ನೂ ಪಿಎಚ್‌ಸಿ ಹಂತದಲ್ಲಿ ಇರುವುದರಿಂದ ಸೂಕ್ತ ವೈದ್ಯಕೀಯ ಸೌಲಭ್ಯ ದೊರೆಯುತ್ತಿಲ್ಲ. ವೈದ್ಯರ ಕೊರತೆಯಿದೆ. ಆಸ್ಪತ್ರೆ ಮೇಲ್ದರ್ಜೆಗೇರಿಸಿ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವ, ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ತಾಪಂ ಮಾಜಿ ಅಧ್ಯಕ್ಷ ಎಂ.ಎಸ್.ಜಯಪ್ರಕಾಶ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಹೇಮಲತಾ, ಗ್ರಾಪಂ ಸದಸ್ಯರಾದ ಬಿ.ಸಿ.ಸಂತೋಷ್‌ಕುಮಾರ್, ಎಂ.ಜೆ.ಮಹೇಶ್ ಆಚಾರ್ಯ, ಇಬ್ರಾಹಿಂ ಶಾಫಿ, ಮಹಮ್ಮದ್ ಜುಹೇಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net