ಉಪ್ಪಾರ ಸಮುದಾಯಕ್ಕೆ ಬೇಕು ಎಸ್ಟಿ ಭಾಗ್ಯ

HSD BAgiratha gurupeeta 03 p1
Published on

ಹೊಸದುರ್ಗ: ಉಪ್ಪಾರ ಸಮುದಾಯದ ಸಮಗ್ರ ಪ್ರಗತಿಗೆ ಎಸ್‌ಟಿ ಮೀಸಲು ಕಲ್ಪಿಸಲು, ಕುಲಶಾಸ್ತ್ರೀಯ ಅಧ್ಯನದ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಒತ್ತಾಯಿಸಿದರು.

ತಾಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಭಗೀರಥ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಶ್ರೀಗಳು ಸಮುದಾಯದ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಉಪ್ಪಾರ ಸಮುದಾಯ ಹಾಗೂ ಭಗೀರಥ ಗುರುಪೀಠದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಶಾಸಕರಾದ ಬಿ.ಜಿ.ಗೋವಿಂದಪ್ಪ, ಕೆ.ಆರ್.ಕೃಷ್ಣಮೂರ್ತಿ, ಪುಟ್ಟೇಗೌಡ, ರಾಜ್ಯ ಉಪ್ಪಾರ ಸಂಘದ ಕಾರ್ಯಾಧ್ಯಕ್ಷ ಲಕ್ಷ್ಮಣ್ ಉಪ್ಪಾರ್, ಗೌರವಾಧ್ಯಕ್ಷ ಬಸವರಾಜಪ್ಪ, ಜಿಪಂ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ನಿವೃತ್ತ ಮುಖ್ಯ ಇಂಜಿನಿಯರ್ ಚೆಲುವರಾಜು, ಡಾ.ಯೋಗೀಶ್‌ಬಾಬು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net