ಉಪ್ಪುಂದ ರಾಣಿಬಲೆ ಮೀನುಗಾರ ಒಕ್ಕೂಟ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

book-1
ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ವಿದ್ಯಾರ್ಥಿಗಳ ಶೈಕ್ಷಣಿಕ, ಆರ್ಥಿಕವಾಗಿ ಸಹಕಾರಿಯಾಗಲು ಹಾಗೂ ಮಕ್ಕಳ ಕಲಿಕೆಗೆ ಉತ್ತೇಜ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ಮಕ್ಕಳಿಗೆ ಪುಸ್ತಕದ ಕೊಡುಗೆ ನೀಡಲಾಗಿದೆ. ಮಕ್ಕಳು ಇದನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುವಂತಾಗಬೇಕು ಎಂದು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ಅಧ್ಯಕ್ಷ ವೆಂಕಟರಮಣ ಖಾರ್ವಿ ಹೇಳಿದರು.

ಸಂಘದ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉದ್ಯೋಗದಲ್ಲಿ ಶಿಕ್ಷಕರಿಗಿಂತ ಶ್ರೇಷ್ಠವಾದದು ಇನ್ನೊಂದಿಲ್ಲ. ವಿದ್ಯಾರ್ಥಿಗಳನ್ನು ರೂಪಿಸುವ ಮೂಲಕ ಸಮುದಾಯದ ಭವಿಷ್ಯ ರೂಪಿಸುತ್ತಾರೆ. ಸಂಘದ ಮೂಲಕ ಶಾಲೆಗಳಿಗೆ ಸೌಲಭ್ಯ ಪೂರೈಕೆಗೆ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕೆ ಪ್ರತಿಯಾಗಿ ಸಮುದಾಯ ಶಿಕ್ಷಕರಿಂದ ಉನ್ನತ ಮಟ್ಟದ ಸೇವೆ ಬಯಸುತ್ತದೆ. ಶಿಕ್ಷಕರು ಇನ್ನಷ್ಟು ಶ್ರಮ ವಹಿಸಿ ಮಕ್ಕಳ ಶೈಕ್ಷಣಿಕ ಏಳಿಗೆಗೆ ಕಾರಣರಾಗಬೇಕು ಎಂದರು.

ಎಲ್‌ಕೆಜಿಯಿಂದ ಎಸ್ಸೆಸ್ಸೆಲ್ಸಿವರೆಗಿನ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆರು ಸಾವಿರ ಪುಸ್ತಕ ಕೊಡುಗೆ ಹಸ್ತಾಂತರಿಸಲಾಯಿತು. ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಪ್ರಧಾನ ಕಾರ್ಯದರ್ಶಿ ಸುರೇಶ ಖಾರ್ವಿ, ಕೋಶಾಧಿಕಾರಿ ನಾಗೇಶ ಖಾರ್ವಿ, ಜತೆ ಕಾರ್ಯದರ್ಶಿ ಸೋಮಶೇಖರ ಖಾರ್ವಿ, ಕಾರ್ಯಕಾರಿ ಸದಸ್ಯರಾದ ಎ.ಶ್ರೀನಿವಾಸ ಖಾರ್ವಿ, ಎಸ್.ಕೃಷ್ಣ ಖಾರ್ವಿ, ರಾಜೇಂದ್ರ ಖಾರ್ವಿ, ಶಂಕರ ಖಾರ್ವಿ, ನವೀನ ಖಾರ್ವಿ, ಶರತ್ ಖಾರ್ವಿ, ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಸ್ವಾಗತಿಸಿದರು. ಸುಭಾಷ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net