ಬ್ಯಾನರ್ ಕಟ್ಟುವ ವಿಷಯಕ್ಕೆ ಗಲಾಟೆ

crime
Published on

ಹುಬ್ಬಳ್ಳಿ: ತಾಲೂಕಿನ ನೂಲ್ವಿ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರೆಗೆ ಬ್ಯಾನರ್ ಕಟ್ಟುವ ವಿಷಯಕ್ಕೆ ಬುಧವಾರ ತಡರಾತ್ರಿ ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ.

ಗಲಾಟೆ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಂಕರ ಎನ್ನುವಾತ ಹಲ್ಲೆಗೆ ಒಳಗಾಗಿದ್ದಾನೆ ಎನ್ನಲಾಗಿದೆ. ಸಿಸಿ ಕ್ಯಾಮರಾದ ದೃಶ್ಯಾವಳಿಗಳನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net