ಊರಮ್ಮ ದೇವಿ ಜಾತ್ರೆ ಅದ್ದೂರಿ

ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಊರಮ್ಮ ದೇವಿ ಜಾತ್ರೋತ್ಸವ ನಿಮಿತ್ತ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಊರಮ್ಮ ದೇವಿ ಜಾತ್ರೋತ್ಸವ ನಿಮಿತ್ತ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
Published on

ಹೂವಿನಹಡಗಲಿ: ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಊರಮ್ಮ ದೇವಿ ಜಾತ್ರೋತ್ಸವ ಬುಧವಾರ ಅದ್ದೂರಿಯಾಗಿ ಜರುಗಿತು. ಮಂಗಳವಾರ ವಿವಿಧ ಜನಪದ ವಾದ್ಯಗಳೊಂದಿಗೆ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಯಿತು.

ದೇವಿಯ ಮೂರ್ತಿಯನ್ನು ಚೌತಿಮನೆೆ ಕಟ್ಟೆಯಲ್ಲಿ ಪ್ರತಿಷ್ಠಾಪಿಸಿ ನಂತರ ಕುಂಭೋತ್ಸವ ಹಾಗೂ ಉಪವಾಸ ಇರುವವರು ವ್ರತಾಚರಣೆ ಪೂರ್ಣಗೊಳಿಸಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವದ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹುಲುಸು (ಚರಗ) ಚೆಲ್ಲಿದರು. ಭಕ್ತರು ದೀರ್ಘದಂಡ ನಮಸ್ಕಾರದೊಂದಿಗೆ ಹರಕೆ ಸಲ್ಲಿಸಿದರು. ಗ್ರಾಮಸ್ಥರು ದೇವಿಗೆ ಉಡಿ ತುಂಬಿದರು. ಕೆಲವರು ಬೆಳ್ಳಿ ಆಭರಣಗಳನ್ನು ನೀಡಿ ಭಕ್ತಿ ಸಮರ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net