ಜಿಲ್ಲಾ ನಗರಾಭಿವೃದ್ಧಿ ಕೋಶದ ಅಭಿಯಂತರಗೆ ಹೃದಯಾಘಾತ

IMG-20241027-WA0025.jpg
Published on

ಬೆಳಗಾವಿ: ಜಿಲ್ಲಾ ನಗರಾಭಿವೃದ್ಧಿ ಕೋಶದ ಅಭಿಯಂತರ ಪದ್ಮಕಾಂತ ಶೆಂಡೂರೆ(59) ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಹಲವು ವರ್ಷಗಳಿಂದ ನಗರಾಭಿವೃದ್ಧಿ ಕೋಶದಲ್ಲಿ ಅಭಿಯಂತರರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದ ಇವರ ಕಾರ್ಯ ವೈಖರಿ ಹಿರಿಯ ಅಧಿಕಾರಿಗಳು ಶ್ಲಾಘನೆಗೆ ಪಾತ್ರರಾಗುತ್ತಿದ್ದರು. ಕಳೆದ ಮೂರು ದಿನಗಳಿಂದ ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಇವರು, ಮರಳಿ ಬೆಳಗಾವಿಯಲ್ಲಿರುವ ಸ್ವಗೃಹಕ್ಕೆ ಬಂದಿದ್ದಾರೆ. ಈ ವೇಳೆ ಏಕಾಎಕಿ ಎದೆನೋವು ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕುಟುಂಬಸ್ಥರು ವಿಚಾರಿಸಲು ಮುಂದಾಗಿದ್ದ ಸಮಯದಲ್ಲಿ ಹೃದಯಾಘಾತದಿಂದ ಅಸುನೀಗಿದ್ದಾರೆ. ಮೃತರ ಸೇವಾವಧಿ ಇನ್ನೊಂದು ತಿಂಗಳಷ್ಟೇ ಇತ್ತು. ಮೂಲತಃ ‌ನಿಪ್ಪಾಣಿ ಮೂಲದವರು.

ಮೃತರ ನಿಧನಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ ಸೇರಿದಂತೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net