ರೈತರಿಗೆ ಸಮರ್ಪಕ ಯೂರಿಯಾ ದೊರಕಿಸಿ

VMS 12-10
Published on

ವಿಜಯಪುರ: ಯೂರಿಯಾ ಗೊಬ್ಬರ ಲಭ್ಯವಿದ್ದರೂ ಮಾರಾಟ ಮಾಡುವ ಅಂಗಡಿ ಮಾಲೀಕರು ಉದ್ದೇಶ ಪೂರ್ವಕವಾಗಿ ಕೃತಕ ಅಭಾವ ಸೃಷ್ಟಿಸಿ ರೈತರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಅಂಥವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಕಾಯಾಧ್ಯಕ್ಷ ಸೋಮನಗೌಡ ಪಾಟೀಲ ಮಾತನಾಡಿ, ವಿಜಯಪು ಜಿಲ್ಲೆಯಲ್ಲಿ ಗೊಬ್ಬರದ ಮಾರಾಟದ ಅಂಗಡಿಯವರು ಯೂರಿಯಾ ಗೊಬ್ಬರ ಸ್ಟಾಕ್ ಇದ್ದರೂ ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ಇದರಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಎಲ್ಲ ಗೊಬ್ಬರ ಅಂಗಡಿಗಳಿಗೆ ಸಂಬಂಧಿಸಿದ ಅಧಿಕಾರಿಗಳು ದಾಳಿ ಮಾಡಿ ತನಿಖೆ ನಡೆಸಿ ತಪ್ಪಿತಸ್ಥ ಅಂಗಡಿಗಳ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ರೈತರಿಗೆ ಸರ್ಕಾರ ನಿಗದಿ ಮಾಡಿದ ದರಕ್ಕೆ ಅವರಿಗೆ ಅವಶ್ಯಕತೆಯಿದ್ದಷ್ಟು ಗೊಬ್ಬರ ಪೂರೈಸಬೇಕು. ಇಲ್ಲದಿದ್ದರೇ ಪ್ರತಿ ಅಂಗಡಿಗಳಿಗೆ ರೈತ ಸಂಘದ ಮುಖಂಡರೆ ತೆರಳಿ ಅಂಗಡಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಬಸವನಬಾಗೇವಾಡಿ ತಾಲೂಕು ಕಾಯಾಧ್ಯಕ್ಷ ಸೋಮನಗೌಡ ಪಾಟೀಲ. ಚಂದ್ರಾಮ ತೆಗ್ಗಿ, ಭೀಮನಗೌಡ ಪಾಟೀಲ, ಚಂದ್ರಶೇಖರ ನಾಟೀಕಾರ, ರಮೇಶ ಮಾದರ, ಜಯಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಮುಖಂಡ ರಾಜಶೇಖರ ಕೋಟ್ಯಾಳ, ಮಹೇಶ ಯರನಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net