ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

2 ckm 6 akmal
ಕಾಂಗ್ರೆಸ್ ಕಿಸಾಲ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್
Published on

ಚಿಕ್ಕಮಗಳೂರು: ಮಾಜಿ ಪ್ರಧಾನಿಗಳ ಮೊಮ್ಮಗ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯವೆಸಗಿ ಮಾನಹಾನಿಗೆ ಮುಂದಾಗಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಾಂಗ್ರೆಸ್ ಕಿಸಾಲ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.

ಸರ್ಕಾರದ ಉನ್ನತ ಉದ್ಯೋಗದಲ್ಲಿರುವ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕವಾಗಿ ಹಿಂಸಿಸಿ ದೌರ್ಜನ್ಯವೆಸಗಿರುವುದು ನಾಚಿಕೇಡಿನ ಸಂಗತಿ. ಕೂಡಲೇ ಪೊಲೀಸ್ ಇಲಾಖೆ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ತೆನೆಹೊತ್ತ ಮಹಿಳೆಯ ಗುರುತಿಗೆ ಅಪಚಾರವೆಸಗುವ ರೀತಿಯಲ್ಲಿ ಹಾಲಿ ಸಂಸದರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿವರ ಮೇಲೆ ಗೂಬೆ ಕೂರಿಸುವ ಬದಲು ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಲೋಕಸಭಾ ಚುನಾವಣಾ ವೇಳೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ಅಣ್ಣನ ಮಗನಲ್ಲ, ನನ್ನ ಮಗ ಎಂದು ಮತಯಾಚಿಸಿದ್ದರು. ಲೈಂಗಿಕ ಪ್ರಕರಣದ ಬಹಿರಂಗಗೊ ಬಳಿಕ ತಾವು ಹಾಗೂ ರೇವಣ್ಣ ಕುಟುಂಬ ವೈಯಕ್ತಿಕವಾಗಿ ಬೇರೆ ಬೇರೆ ಎಂದು ಹೇಳುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net