ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು ಒತ್ತಾಯ

14 ckm 3
ಚಿಕ್ಕಮಗಳೂರು ಡಿಎಚ್‌ಒ ಡಾ.ಅಶ್ವಥ್‌ಬಾಬು ಅವರಿಗೆ ಮನವಿ ಸಲ್ಲಿಸಿದ ನಗರಸಭೆ ನಾಮನಿರ್ದೇಶಿತ ಸದಸ್ಯರು ಹಾಗೂ ಹೌಸಿಂಗ್ ಬೋರ್ಡ್ ನಿವಾಸಿಗಳು ಕೂಡಲೇ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯುವಂತೆ ಒತ್ತಾಯಿಸಿದರು. ಸಿ.ಎಂ.ಕೀರ್ತಿಶೇಟ್, ಚಂದ್ರಶೇಖರ್, ರಮೇಶ್, ನಾಗರಾಜ್, ಜಯಚಂದ್ರ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಸಾರ್ವಜನಿಕರ ಹಿತಾಸಕ್ತಿ ದೃಷ್ಟಿಯಿಂದ ನಗರದ ವಾರ್ಡ್ ನಂ. ೧ರ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಬೇಕು ಎಂದು ನಾಮನಿರ್ದೇಶಿತ ನಗರಸಭಾ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಡಿಎಚ್‌ಒ ಡಾ. ಅಶ್ವಥ್‌ಬಾಬು ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ನಗರಸಭೆ ಸದಸ್ಯ ಸಿ.ಎಂ.ಕೀರ್ತಿಶೇಟ್, ಈಗಾಗಲೇ ಹೌಸಿಂಗ್ ಬೋರ್ಡ್ ಬಡಾವಣೆ ವಸತಿ ಯೋಗ್ಯ ಪ್ರದೇಶವಾಗಿದೆ. ಅನೇಕ ಸರ್ಕಾರಿ ಕಚೇರಿ, ನ್ಯಾಯಾಲಯ, ಶಾಲೆ ಮತ್ತು ಕಾಲೇಜುಗಳನ್ನು ಒಳಗೊಂಡು ದಿನೇ ದಿನೇ ವಿಸ್ತಾರವಾಗುತ್ತಿದೆ ಎಂದು ಹೇಳಿದರು.
ಪ್ರಸ್ತುತ ವಾರ್ಡಿನಲ್ಲಿ ಮರ‍್ನಾಲ್ಕು ಸಾವಿರ ಜನಸಂಖ್ಯೆಯಿದೆ. ಬಡ, ಮದ್ಯಮ ವರ್ಗದವರೇ ಹೆಚ್ಚಿರುವ ಕಾರಣ ಸುತ್ತಮುತ್ತಲು ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳೇ ಇದ್ದು, ಬಡವರು ಚಿಕಿತ್ಸೆ ಪಡೆಯುವುದು ಕಷ್ಟವಾಗಿದೆ. ಹೀಗಾಗಿ ವಾರ್ಡ್ನಲ್ಲಿ ಶೀಘ್ರವೇ ಆರೋಗ್ಯ ಕೇಂದ್ರ ಸ್ಥಾಪಿಸಿದರೆ ಬಹಳಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.
ಹೌಸಿಂಗ್ ಬೋರ್ಡ್ನಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಿದರೆ ಈ ಮಾರ್ಗವಾಗಿ ದಾಸರಹಳ್ಳಿ, ಸಗನೀಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ಸೇವೆ ನೀಡಿದಂತಾಗುತ್ತದೆ. ಜೊತೆಗೆ ಗ್ರಾಮೀಣ ಪ್ರದೇಶಗಳ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್, ರಮೇಶ್, ನಿವಾಸಿಗಳಾದ ನಾಗರಾಜ್, ಜಯಚಂದ್ರ, ಇಂದುಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net