ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

mng-6sep-urva
Published on



ಮಂಗಳೂರು : ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಮುಂದಿನ ವರ್ಷಾವಧಿ ಮಹಾಪೂಜೆಗೆ ಮುಂಚಿತವಾಗಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು.
ಅವಿಭಜಿತ ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಡಾ. ಜಿ.ಶಂಕರ್ ಮತ್ತು ಉಡುಪಿಯ ಶಾಸಕ ಯಶಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮುಂದಿನ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕಲಶೋತ್ಸವ ನಿಮಿತ್ತ ವೈದಿಕ ಕಾರ್ಯಕ್ರಮಗಳು ನೆರವೇರಲಿದೆ. ಇದಕ್ಕೆ ಪೂರ್ವಭಾವಿಯಾಗಿ ದೇಗುಲದ ಗರ್ಭಗುಡಿಯ ಜೀರ್ಣೋದ್ಧಾರ ಕಾರ್ಯ ನಡೆಯಲಿದೆ ಎಂದು ಸಭೆಗೆ ತಿಳಿಸಲಾಯಿತು. ವಿವಿಧ ಗ್ರಾಮ ಸಭೆಗಳ, ಮೀನುಗಾರರ ಸಂಘಟನೆಗಳ ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳು ಸಲಹೆ ಸೂಚನೆಗಳನ್ನು ನೀಡಿದರು. ಕ್ಷೇತ್ರದ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನದ ನಿರ್ಮಾಣ ಕಾರ್ಯವನ್ನು ಕೂಡಾ ತ್ವರಿತಗೊಳಿಸಲು ನಿರ್ಧಾರ ಕೈಗೊಳ್ಳಲಾಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮಣ ಅಮೀನ್ ಕೋಡಿಕಲ್, ಮೊಗವೀರ 7 ಪಟ್ಣ ಸಂಯುಕ್ತ ಸಭೆಯ ಅಧ್ಯಕ್ಷ ಲೋಕೇಶ್ ಸುವರ್ಣ, ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ ಶಶಿಕುಮಾರ್ ಬೆಂಗ್ರೆ, ಟ್ರಾಲ್ ಬೋಟ್ ಸಹಕಾರಿ ಸಂಘದ ಅಧ್ಯಕ್ಷ ನಿತಿನ್ ಕುಮಾರ್, ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್, ದ.ಕ. ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್, ಉದ್ಯಮಿ ಮೋಹನ್ ಬೆಂಗ್ರೆ, ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಚೇತನ್ ಬೆಂಗ್ರೆ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಮಚಂದರ್ ಬೈಕಂಪಾಡಿ, ಅವಿಭಜಿತ ದ.ಕ. ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಉಷಾರಾಣಿ,
ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಕುಮಾರ್ ಮೆಂಡನ್, ಕೋಶಾಧಿಕಾರಿ ವಸಂತ್ ಅಮೀನ್ , ದೇವಸ್ಥಾನದ ಮೊಕ್ತೇಸರರುಗಳಾದ ಮಾಧವ ಪುತ್ರನ್, ಯಾಧವ ಸುವರ್ಣ ಕುದ್ರೋಳಿ, ಯಾಧವ ಸಾಲ್ಯಾನ್ ಕುದ್ರೋಳಿ , ಪುರುಷೋತ್ತಮ್ ಕೋಟ್ಯಾನ್ ಬೊಕ್ಕಪಟ್ಣ, ಯಶವಂತ ಪಿ ಮೆಂಡನ್ ಬೋಳೂರು, ರಂಜನ್ ಎಸ್. ಕಾಂಚನ್ ಬೋಳೂರು, ವಾಸುದೇವ ಸಾಲ್ಯಾನ್ ಬೈಕಂಪಾಡಿ, ಸುರೇಶ್ ಕುಂದರ್ ಕೂಳೂರು, ಅಮರ್‌ನಾಥ್ ಸುವರ್ಣ ಉಪಸ್ಥಿತರಿದ್ದರು.
ಮೊಗವೀರ 7 ಪಟ್ಣ ಸಂಯುಕ್ತ ಸಭಾದ ಪ್ರಧಾನ ಕಾರ್ಯದರ್ಶಿ ಜಗದೀಶ್ ಬಂಗೇರ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಗೌತಮ್ ಸಾಲ್ಯಾನ್ ಕೋಡಿಕಲ್ ಸಭೆಯ ಉದ್ದೇಶ ತಿಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕರ್ಕೇರ ಪ್ರಸ್ತಾವನೆಗೈದರು. ಯಶವಂತ್ ಬೋಳೂರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net