

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಕಲಿಕೆಯಿಂದ ಕ್ರಿಯಾಶೀಲತೆ, ಕ್ರಿಯಾಶೀಲತೆಯಿಂದ ಚಿಂತನೆ, ಚಿಂತನೆಯು ಹೊಸ ಜ್ಞಾನಕ್ಕೆ ದಾರಿಮಾಡಿಕೊಡುತ್ತದೆ. ಜ್ಞಾನ ಸಂಪಾದನೆಯಿಂದ ಭವ್ಯ ಭಾರತ ನಿರ್ಮಾಣ ಮಾಡಲು ಸಿದ್ಧರಾಗಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಶಿವಾನಂದ ನಾಯಕ ಹೇಳಿದರು.
ಇಲ್ಲಿಯ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಕವಿವಿ ಸಿಂಡಿಕೇಟ್ ಸದಸ್ಯ ಶ್ಯಾಮ ಮಲ್ಲನಗೌಡರ್ ಮಾತನಾಡಿ, ಶಿಕ್ಷಕರು ಶಿಕ್ಷಕ ವೃತ್ತಿಯನ್ನು ಪ್ರೀತಿಸಿದರೆ ಯಶಸ್ಸು ಕಾಣಲು ಸಾಧ್ಯ ಎಂದರು. ಕೆಎಲ್ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರತೀಕ ಚೂರಿ ಹಾಗೂ ಮಹಿಳಾ ವಿಭಾಗದ ಕಾರ್ಯದರ್ಶಿ ಪ್ರತಿಭಾ ನವಲಗುಂದ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷೆ ಡಾ. ಜಯಶ್ರೀ ಕುಂದಗೋಳಮಠ ವಾರ್ಷಿಕ ವರದಿ ವಾಚಿಸಿದರು. ಸಂಗೀತಾ ಕಟಗಿ ನಿರೂಪಿಸಿದರು.