ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಬಳಕೆ : ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

BJP Protest
Published on

ಮೈಸೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ 11 ಸಾವಿರ ಕೋಟಿ ರೂ. ಅನುದಾನ ಬಳಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಎಸ್‌ಸಿ ಮೋರ್ಚಾ ನಗರ ಮತ್ತು ಜಿಲ್ಲಾ ಘಟಕ ವತಿಯಿಂದ ಪುರಭವನ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.

ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಅನುದಾನ ಬಳಕೆ ಮಾಡಿರುವುದು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಉಲ್ಲಂಘನೆಯಾಗಿದೆ. ಸರ್ಕಾರ ತನ್ನ ನಿರ್ಧಾರ ಹಿಂಪಡೆಯದೆ ಇದ್ದರೆ ಮುಂದಿನ ದಿನಗಳಲ್ಲಿ ತೀವ್ರ ತರದ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಕಾರ್ಯಕರ್ತರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಸಿ. ಮಹದೇವಯ್ಯ, ನಗರಾಧ್ಯಕ್ಷ ಈಶ್ವರ್, ಪ್ರಮುಖರಾದ ನರಸಿಂಹಮೂರ್ತಿ, ಜಯರಾಮ್, ಡಿ.ಮಂಜುನಾಥ್ ಬಾಬು, ಎಂ. ಮಂಜು ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net