ಕಾನೂನು ಬಾಹಿರ ಚಟುವಟಿಕೆಗೆ ಸಾಮಾಜಿಕ ಜಾಲತಾಣ ಬಳಕೆ

IMG-20240731-WA0395
Published on

ವಿಜಯವಾಣಿ ಸುದ್ದಿಜಾಲ ಅರಸೀಕೆರೆ (ಗ್ರಾಮಾಂತರ)
ಅಧುನಿಕ ತಂತ್ರಜ್ಞಾನ ಅವಿಷ್ಕಾರಗಳ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕಾನೂನು ಬಾಹಿರ ಚಟುವಟಿಕೆಗಳಿಗೆ ದುರುಪಯೋಗವಾಗುತ್ತಿದೆ ಎಂದು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೇಶ್ ವಿ.ಭಂಡಾರಿ ಹೇಳಿದರು.


ಮಾನವ ಕಳ್ಳ ಸಾಗಣೆ ವಿರೋಧಿ ದಿನ ಪ್ರಯುಕ್ತ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


ಆಧುನಿಕ ನಾಗರಿಕತೆ ಒಪ್ಪಿಕೊಳ್ಳುವ ಭರದಲ್ಲಿ ಮೊಬೈಲ್ ಫೋನ್ ಎಂಬ ಮಾಯಾಜಾಲಕ್ಕೆ ವಯಸ್ಸಿನ ಬೇಧವಿಲ್ಲದೇ ಶರಣಾಗುತ್ತಿದ್ದಾರೆ. ಇಂತಹ ಬೆಳವಣಿಗೆಯಲ್ಲಿ ಅಪ್ರಾಪ್ತ ಮಕ್ಕಳೊಂದಿಗೆ ಹೆಣ್ಣು ಮಕ್ಕಳು ಸಾಮಾಜಿಕ ಜಾಲತಾಣಗಳ ಜಾಲಕ್ಕೆ ಸಿಲುಕುತ್ತಿರುವುದು ಆತಂಕವಾಗಿದೆ ಎಂದರು.
ಹೆಣ್ಣುಮಕ್ಕಳ ಮುಗ್ಧತೆ ಮತ್ತು ಪ್ರಪಂಚ ಜ್ಞಾನ ಇಲ್ಲದಿರುವದನ್ನೇ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮಕ್ಕಳೊಂದಿಗೆ ವಿಶೇಷವಾಗಿ ಹೆಣ್ಣು ಮಕ್ಕಳನ್ನು ವಿವಿಧ ಅಮೀಷಗಳೊಂದಿಗೆ ಮಾನವ ಕಳ್ಳಸಾಗಣೆಗೆ ವ್ಯಾಪಕವಾಗಿ ಉಪಯೋಗಿಸಿಕೊಳ್ಳುತ್ತಿದೆ. ಮಾನವ ಕಳ್ಳಸಾಗಣೆ ಜಾಲದಿಂದ ಮಕ್ಕಳನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರದಾಗಿದ್ದು, ನಮ್ಮ ಸುತ್ತಮುತ್ತಲಿನ ನಾಗರಿಕ ಸಮಾಜವು ಸದಾ ಜಾಗೃತವಾಗಿರಬೇಕು ಎಂದು ತಿಳಿಸಿದರು.


ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಮಾತನಾಡಿದರು. ಸಹಾಯಕ ಸರ್ಕಾರಿ ಇಂಜಿನಿಯರ್ ಶಶಾಂಕ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಸದಾನಂದ, ಕಾರ್ಯದರ್ಶಿ ಪ್ರಕಾಶ್, ಹಿರಿಯ ವಕೀಲ ಸಿದ್ದಮಲ್ಲಪ್ಪ , ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಲೋಕೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net