ಪ್ರತಿಭೆ ಅನಾವರಣಕ್ಕೆ ವೇದಿಕೆ ಬಳಸಿಕೊಳ್ಳಿ

ಸೋಮವಾರಪೇಟೆ ಬಿ.ಟಿ. ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಂತರ ಕಾಲೇಜು ಕಲ್ಚರಲ್ ಫೆಸ್ಟ್ 2025 ಕಾರ್ಯಕ್ರಮದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಮಡಿಕೇರಿ ಜಿಎಫ್‌ಜಿಸಿ ತಂಡ.
ಸೋಮವಾರಪೇಟೆ ಬಿ.ಟಿ. ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಂತರ ಕಾಲೇಜು ಕಲ್ಚರಲ್ ಫೆಸ್ಟ್ 2025 ಕಾರ್ಯಕ್ರಮದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಮಡಿಕೇರಿ ಜಿಎಫ್‌ಜಿಸಿ ತಂಡ.
Published on

ಸೋಮವಾರಪೇಟೆ: ಇಲ್ಲಿನ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗಗಳ ವತಿಯಿಂದ ಶುಕ್ರವಾರ ಜಿಲ್ಲಾ ಮಟ್ಟದ ಅಂತರ ಕಾಲೇಜು ಕಲ್ಚರಲ್ ಫೆಸ್ಟ್ 2025 ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಡಿ.ದೇವರಾಜ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪೂರಕವಾದ ಇಂತಹ ಕಾರ್ಯಕ್ರಮಗಳು ಶಾಲೆ, ಕಾಲೇಜುಗಳಲ್ಲಿ ಹೆಚ್ಚಾಗಿ ಆಯೋಜನೆಗೊಂಡಲ್ಲಿ, ಸಾಕಷ್ಟು ಪ್ರತಿಭೆಗಳಿಗೆ ತಮ್ಮಲ್ಲಿನ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗುವುದು. ಇಂತಹ ವೇದಿಕೆಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ. ಸ್ಪರ್ಧೆಗಳಲ್ಲಿ ಯಾವುದೇ ಬಹುಮಾನ ಪಡೆಯಲು ಮಾತ್ರ ಬಳಸಿಕೊಳ್ಳದೆ, ತಮ್ಮ ಪ್ರತಿಭೆ ಅನಾವರಣಕ್ಕೆ ಬಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಬಿ.ಡಿ.ಹರ್ಷ ಮಾತನಾಡಿ, ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ ಸಿಗದ ಕಾರಣ, ಎಲೆಮರೆ ಕಾಯಿಯಂತೆ ಇರುತ್ತಾರೆ. ತಮ್ಮ ಪ್ರತಿಭೆ ಅನಾವರಣಕ್ಕೆ ಯಾವುದೇ ಅಂಜಿಕೆ ಇಲ್ಲದೆ, ಎಲ್ಲ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಕೆ.ಎ.ಯಾಕೂಬ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನಗಳ ಬಗ್ಗೆ ಎಚ್ಚರದಿಂದ ಇರಬೇಕಾಗಿದೆ. ಇದರ ಬಲೆಗೆ ಬಿದ್ದರೆ, ತಮ್ಮನ್ನು ನಾಶ ಮಾಡಿವುದರೊಂದಿಗೆ, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಡುತ್ತದೆ ಎಂದು ಎಚ್ಚರಿಸಿದರು.

ಇದೇ ಸಂದರ್ಭ ನಿವೃತ್ತ ಪ್ರಾಂಶುಪಾಲ ಬಿ.ಎಂ.ಪ್ರವೀಣ್ ಅವರನ್ನು ಸನ್ಮಾನಿಸಲಾಯಿತು. ಸಿಡಿಸಿ ಸದಸ್ಯರಾದ ರಜಾಕ್ ಮತ್ತು ಸುರೇಂದ್ರ, ಸಾಂಸ್ಕೃತಿಕ ಸಮಿತಿ ಸಂಚಾಲಕ ಎಚ್.ಹುಚ್ಚೇಗೌಡ, ಸಂಯೋಜಕರಾದ ಎಂ.ಎಂ.ಸುನೀತಾ, ಸಹಾಯಕ ಪ್ರಾಧ್ಯಾಪಕರಾದ ಎಂ.ಎಸ್.ಶಿವಮೂರ್ತಿ, ವಿದ್ಯಾರ್ಥಿಗಳಾದ ನಾಸಿರ್, ಭವ್ಯಾ, ಐಶ್ವರ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಾಮೂಹಿಕ ನೃತ್ಯ, ಟ್ರೆಸರ್ ಹಂಟರ್, ಫೇಸ್ ಪೇಂಟಿಂಗ್ ಮತ್ತು ವಿಡಿಯೋಗ್ರಫಿ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು. ಹತ್ತು ಕಾಲೇಜುಗಳ 14 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ ಮಡಿಕೇರಿ ಜಿಎಫ್‌ಜಿಸಿ ತಂಡ ಚಾಂಪಿಯನ್ ಮತ್ತು ವಿರಾಜಪೇಟೆಯ ಜಿಎಫ್‌ಜಿಸಿ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net