ಅರ್ಜುನನನ್ನು ಕಾರ್ಯಾಚರಣೆಗೆ ಬಳಸಿದ್ದು ಕಾನೂನು ಬಾಹಿರ: ವಿಧಾನ ಪರಿಷತ್ತಿನ ಸದಸ್ಯ ದಿನೇಶ್ ಗೂಳಿಗೌಡ ಅವರಿಂದ ಮುಖ್ಯಮಂತ್ರಿ ಪತ್ರ

download (1)
Published on

ಮೈಸೂರು: ಸುಪ್ರೀಂಕೋರ್ಟ್ ಆದೇಶವಿದ್ದರೂ ಅದನ್ನು ಮೀರಿ ಅರ್ಜುನ ಆನೆಯನ್ನು ಕಾರ್ಯಾಚರಣೆಗೆ ಬಳಕೆ ಮಾಡಿರುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಜತೆಗೆ, ಮುಂದೆ ಹೀಗೆ ಆಗದಂತೆ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರೆಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನನನ್ನು ಕಾಡಾನೆ ಸೆರೆ, ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆಗೆ ಬಳಕೆ ಮಾಡಿಕೊಂಡು, ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಳಗದಲ್ಲಿ ಮೃತಪಟ್ಟಿರುವುದು ನಿಜಕ್ಕೂ ದುಃಖಕರ ವಿಷಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
60 ವರ್ಷ ಮೇಲ್ಪಟ್ಟ ಪ್ರಾಣಿಗಳ ಮೇಲೆ ಭಾರ ಹೊರಿಸುವ ಕೆಲಸ ಮಾಡಬಾರದು. ಕಾರ್ಯಾಚರಣೆಗಳಿಗೆ ಬಳಸಕೂಡದೆಂದು ಸುಪ್ರೀಂಕೋರ್ಟ್ ಈ ಹಿಂದೆ ಆದೇಶ ಮಾಡಿತ್ತು. ಈಗ ಅರ್ಜುನನಿಗೆ 64 ವರ್ಷವಾಗಿತ್ತು. ಇದೇ ಕಾರಣಕ್ಕಾಗಿಯೇ ಅಂಬಾರಿ ಹೊರಿಸದೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಕಾರ್ಯಾಚರಣೆಗೆ ಬಳಸಿರುವುದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ ಅಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net