ಹಿಜಾಬ್ ಪಟ್ಟು ಹಿಡಿಯುವವರು ಪಾಕ್ ನೋಡಿ ಬನ್ನಿ: ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದ ಯುಟಿ ಖಾದರ್

ut
Published on

ಮಂಗಳೂರು: ಹಿಜಾಬ್ ಬೇಕು ಎಂದು ಪಟ್ಟು ಹಿಡಿಯುವ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋದರೆ, ಭಾರತದ ಮಹತ್ವ ಗೊತ್ತಾಗುತ್ತದೆ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ.
ಸೋಮವಾರ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಬೇಕಾದ ಹಾಗೆ ಮಾತನಾಡಬಹುದು. ಡಿಸಿಯನ್ನು ಭೇಟಿಯಾಗಬಹುದು, ಪ್ರೆಸ್‌ಮೀಟ್ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ, ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನಂತೆ ಆಗುತ್ತಾರೆ. ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಆಗ ಗೊತ್ತಾಗುತ್ತದೆ. ಇಲ್ಲಿ ಸಿಗುವ ಲಿಬರ್ಟಿಯ ಅರಿವು ಆಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net