

ದಾವಣಗೆರೆ: ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬೆಳಗ್ಗೆ ಅಪಘಾತಕ್ಕೀಡಾದ ಘಟನೆ ಆನಗೋಡು ಬಸ್ ನಿಲ್ದಾಣದ ಸರ್ವಿಸ್ ರಸ್ತೆ ಬಳಿ ಸಂಭವಿಸಿದೆ.
ಯು.ಟಿ.ಖಾದರ್ ಅವರಿದ್ದ ಕಾರು ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಸಾಗುತ್ತಿತ್ತು. ಆನಗೋಡು ಹಂಪ್ಸ್ ಬಳಿ ಮುಂದೆ ಸಾಗುತ್ತಿದ್ದ ಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಮಾಜಿ ಸಚಿವರು ಪ್ರಾಣಪಾಯದಿಂದ ಪಾರಾಗಿದ್ದಾರೆ.