ಶ್ರೀರಂಗಪಟ್ಟಣದಲ್ಲಿ ಚಿಕ್ಕ ರಥೋತ್ಸವ ಸಂಭ್ರಮ: ಶ್ರೀದೇವಿ, ಭೂದೇವಿ, ಶ್ರೀರಂಗನಾಯಕಿ ಸಮೇತ ಶ್ರೀ ರಂಗನಾಥಸ್ವಾಮಿ ಉತ್ಸವಮೂರ್ತಿ ಮೆರವಣಿಗೆ

IMG-20230116-WA0082
Published on

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀ ಆದಿರಂಗನಾಥ ಸ್ವಾಮಿಯ ಚಿಕ್ಕ ರಥೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.

ಪುರಾಣ ಪ್ರಸಿದ್ಧ ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಮಧ್ಯಾಹ್ನ ಶ್ರೀದೇವಿ, ಭೂದೇವಿ, ಶ್ರೀರಂಗನಾಯಕಿ ಅಮ್ಮನವರ ಸಮೇತ ಶ್ರೀ ರಂಗನಾಥಸ್ವಾಮಿ ಉತ್ಸವಮೂರ್ತಿಗೆ ದೇವಾಲಯದ ಪ್ರಧಾನ ಅರ್ಚಕ ವಿಜಯಸಾರಥಿ ನೇತೃತ್ವದಲ್ಲಿ ವೈದಿಕರ ತಂಡ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ವಿಷ್ಣು ಸಹಸ್ರನಾಮ ಪಠಣೆಗಳೊಂದಿಗೆ ವಿಶೇಷ ಪಲ್ಲಕ್ಕಿಯಲ್ಲಿ ಮೆರವಣಿಗೆ ನಡೆಸಿ ಬಳಿಕ ಹೋಮ, ಬಲಿಪ್ರದಾನ, ಯಾತ್ರದಾನಗಳೊಂದಿಗೆ ಪೂಜಾ ಕೈಂಕರ್ಯಗಳು ಜರುಗಿದವು. ಉತ್ಸವಮೂರ್ತಿಗಳನ್ನು ಚಿಕ್ಕತೇರಿನಲ್ಲಿ ಕೂರಿಸಿ ದೇವಾಲಯದ ಹೊರಭಾಗದ ಸುತ್ತ ಎಳೆದರು.

ಜ.19ರವರೆಗೆ ವೈಕುಂಠ ದ್ವಾರ ಪ್ರವೇಶಕ್ಕೆ ಅವಕಾಶ: ಮಕರ ಸಂಕ್ರಾಂತಿ ಪ್ರಯುಕ್ತ ವರ್ಷಕ್ಕೊಮ್ಮೆ ತೆರೆಯುವ ವೈಕುಂಠ ದ್ವಾರದ ಪ್ರವೇಶಕ್ಕೆ ಭಕ್ತರು ಹಾಗೂ ಸಾರ್ವಜನಿಕರಿಗಾಗಿ ಜ.19ರ ವರೆಗೆ ಶ್ರೀರಂಗನಾಥಸ್ವಾಮಿ ದೇವಾಲಯ ಆಡಳಿತ ಅವಕಾಶ ಕಲ್ಪಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net