

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆ ಕಾರ್ಯಕ್ರಮದಡಿ ಬಿಡುಗಡೆಯಾದ ಅನುದಾನವನ್ನು ಆಯಾ ಇಲಾಖೆ ಅಕಾರಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್‌ಸಿಪಿ, ಟಿಪಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನುದಾನ ವಾಪಸ್ ಹೋಗದಂತೆ ಯೋಜನೆಯನ್ನು ಲಾನುಭವಿಗಳಿಗೆ ತಲುಪಿಸಲು ಕ್ರಮಕೈಗೊಳ್ಳಬೇಕು ಎಂದರು.
ಪ್ರತಿ ತಿಂಗಳು 10ರಂದು ತಾಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ಸಭೆಯಲ್ಲಿ ಚರ್ಚಿಸಲಾದ ವಿಷಯಗಳನ್ನು ಪ್ರತಿ ತಿಂಗಳು 15ರಂದು ನಡೆಯುವ ಜಿಲ್ಲಾ ಮಟ್ಟದ ಸಭೆಯಲ್ಲಿ ಕ್ರಮಕೈಗೊಂಡ ಕುರಿತು ಮಾಹಿತಿ ನೀಡಬೇಕು. ನಿಗದಿತ ನಮೂನೆಯಲ್ಲಿ ವರದಿ ಸಿದ್ಧಪಡಿಸಿ ಅಕೃತ ಜಾಲತಾಣದಲ್ಲಿ ಅಪ್‌ಲೋಡ್ ಮಾಡಬೇಕು.
ಹಲವು ಇಲಾಖೆಗಳು ಬಿಡುಗಡೆಯಾದ ಅನುದಾನ ಖರ್ಚು ಮಾಡಿಕೊಂಡಿಲ್ಲ. ಜತೆಗೆ ಭೌತಿಕ ಗುರಿಯನ್ನು ಮುಟ್ಟಿಲ್ಲ. ಕೂಡಲೇ ಸಂಬಂಸಿದ ಅಕಾರಿಗಳು ನಿಗದಿತ ಗುರಿ ಸಾಧನೆಗೆ ಅಗತ್ಯ ಕ್ರಮಕೈಗೊಂಡು ಮಾಹಿತಿಯನ್ನು ನೀಡಬೇಕು.
ಜಿಲ್ಲೆಯಲ್ಲಿನ 33 ಇಲಾಖೆಗಳಿಗೆ ಈಗಾಗಲೇ 277 ಕೋಟಿ ರೂ ಅನುದಾನ ನಿಗದಿಯಾಗಿದ್ದು, ಅದರಲ್ಲಿ 161 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 124 ಕೋಟಿ ರೂ. ಅನುದಾನವನ್ನು ಬಳಕೆ ಮಾಡಿಲ್ಲ. ಕೂಡಲೇ ಅನುದಾನ ಬಳಕೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಡಾ.ಕೆ.ಆರ್.ದುರಗೇಶ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಸಕ ಡಾ.ಮಹ್ಮದ್ ಅಲಿ, ಜಿಲ್ಲಾ ಕಾರ್ಮಿಕ ಅಕಾರಿ ಆರತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ ಉಪಸ್ಥಿತರಿದ್ದರು.