ಹಿರೀಸಾವೆಯಲ್ಲಿ ಉತ್ಸವಮೂರ್ತಿ ಮೆರವಣಿಗೆ

Oplus_0
ಹಿರೀಸಾವೆ ಹೋಬಳಿ ಬೂಕನಬೆಟ್ಟದ ಶ್ರೀ ರಂಗನಾಥಸ್ವಾಮಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು.
Published on

ಹಿರೀಸಾವೆ: ಹೋಬಳಿಯ ಬೆಳಗಿಹಳ್ಳಿ, ಬೂಕನಬೆಟ್ಟ, ಗಿರಿಕ್ಷೇತ್ರ ಹಾಗೂ ಪಟ್ಟಣದ ಶ್ರೀ ಚೆನ್ನಕೇಶವಸ್ವಾಮಿ ದೇಗುಲಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶುಕ್ರವಾರ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಮುಂಜಾನೆಯೇ ದೇಗುಲಗಳಿಗೆ ಹಸಿರು ಚಪ್ಪರ ಹಾಕಿ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಭಕ್ತರು ಹಣ್ಣು ಕಾಯಿ ಅರ್ಪಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.

ಹಿರೀಸಾವೆಯ ಶ್ರೀ ಚೆನ್ನಕೇಶವ ನೈಟ್ ಚಾಟ್ಸ್ ಸಂಘದ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆದವು. ಸಂಜೆ ಕೇಶವ ದೇವರ ಮೆರವಣಿಗೆಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಸಿದರು. ದಿಡಗ ಗ್ರಾಮದ ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನಡೆಸಿದರು.

ಬೂಕನಬೆಟ್ಟದ ಶ್ರೀ ರಂಗನಾಥಸ್ವಾಮಿ ಮತ್ತು ಬೆಳಗಿಹಳ್ಳಿಯ ಶ್ರೀ ಕಂಬದ ನರಸಿಂಹಸ್ವಾಮಿಗೆ ಬೆಳಗ್ಗೆ 5 ಗಂಟೆಗೆ ಅಭಿಷೇಕ ಮತ್ತು ವಿಶೇಷ ಪೂಜೆಗಳನ್ನು ನೆರವೇರಿಸಿ ಉತ್ಸವಮೂರ್ತಿಗಳನ್ನು ಉಯ್ಯಲೆಯಲ್ಲಿ ಕೂರಿಸಿ ತೂಗಲಾಯಿತು.

ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರು ದರ್ಶನ ಪಡೆದರು. ಎಲ್ಲ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದವನ್ನು ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net