ಈ ವರ್ಷ 120 ಸೇತುವೆ ನಿರ್ಮಾಣ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಕುಮಟಾ ತಾಲೂಕಿನ ಕಲಭಾಗದಲ್ಲಿ ಮೂವತ್ತು ಗುಂಡಿ ಸೇತುವೆ ಕಾಮಗಾರಿಗೆ ಸೋಮವಾರ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಶಿಲಾನ್ಯಾಸ ನೆರವೇರಿಸಿದರು
Published on:
Copied
Follow Us
ಕಾರವಾರ: ರಾಜ್ಯದಲ್ಲಿ ಈ ವರ್ಷ ಹೊಸದಾಗಿ 120 ಸೇತುವೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಕುಮಟಾ ತಾಲೂಕಿನ ಕಲಭಾಗದಲ್ಲಿ ಮೂವತ್ತು ಗುಂಡಿ ಸೇತುವೆ ಕಾಮಗಾರಿಗೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಒಂದು ಭಾಗದಿಂದ ಇನ್ನೊಂದು ಭಾಗದ ಸಂಪರ್ಕ ಕಡಿತವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಒದಗಿಸಲು ಈಗಾಗಲೇ 12 ಜಿಲ್ಲೆಗಳಲ್ಲಿ 400 ಕಾಲು ಸಂಕ ನಿರ್ಮಾಣ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಆದ್ಯತೆಯ ಮೇಲೆ ಹೆಚ್ಚಿನ ಸಂಖ್ಯೆಯ ಕಾಲ ಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಶಿಥಿಲಾವಸ್ಥೆಯಲ್ಲಿರುವ ಹಳೆ ಸೇತುವೆಗಳಿಗೆ ತಕ್ಷಣವೇ ಸೇತುವೆ ಮರು ನಿರ್ಮಾಣ ಮಾಡಲು ಮಂಜೂರಾತಿ ನೀಡುತ್ತಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು. ನದಿಯ ಹಿನ್ನಿರಿಗೆ ಸಮುದ್ರದ ಉಪ್ಪು ನೀರು ಮಿಶ್ರಣವಾಗುವುದರಿಂದ ರೈತರು ಸಂಕಷ್ಟಕ್ಕೆ ಒಳಗಾಗುತ್ತಿದ್ದು, ಸೇತುವೆ ನಿರ್ಮಾಣದ ಸಂದರ್ಭದಲ್ಲಿ ಬ್ಯಾರೇಜ್ ನಿರ್ಮಾಣ ಮಾಡುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು.
ಶಾಸಕ ದಿನಕರ ಶೆಟ್ಟಿ ಮಾತನಾಡಿ, ಈ ಮೊದಲು 3 ಮೀಟರ್ ಇದ್ದ ಮೂವತ್ತು ಗುಂಡಿ ಸೇತುವೆಯನ್ನು 9 ಮೀಟರ್‌ಗೆ ವಿಸ್ತರಣೆ ಮಾಡಲಾಗುತ್ತಿದೆ. ಇದರ ಜತೆ ಬ್ಯಾರೇಜ್ ಕೂಡ ನಿರ್ಮಾಣ ಮಾಡುವ ಮೂಲಕ ಉಪ್ಪು ನೀರು ರೈತರ ಗದ್ದೆಗೆ ಹೋಗದಂತೆ ತಡೆದು ರೈತರಿಗೆ ಅನುಕೂಲ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಮಾಜಿ ಶಾಸಕಿ ಶಾರದ ಶೆಟ್ಟಿ, ಜಿಲ್ಲಾಽಕಾರಿ ಕೆ.ಲಕ್ಷಿ÷್ಮÃಪ್ರಿಯಾ, ಜಿಪಂ ಸಿಇಒ ಡಾ.ದಿಲೀಶ್ ಶಶಿ, ಎಸಿ ಶ್ರವಣಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.
ಅಧಿಕಾರ ಹಂಚಿಕೆ ಗೊಂದಲ ಇದೆ
ಅಽಕಾರ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಸಾಕಷ್ಟು ಗೊಂದಲ ಇದೆ. ಈ ಗೊಂದಲ ನಿವಾರಣೆಗೆ ಕ್ರಮವಾಗಬೇಕಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕುಮಟಾದಲ್ಲಿ ಮಾಧ್ಯಮ ಪ್ರತಿನಿಽಗಳ ಜೊತೆ ಮಾತನಾಡಿದ ಅವರು, ಐದು ವರ್ಷಕ್ಕೆ ಎಂದು ಸಿಎಂ ಅವರನ್ನು ಆಯ್ಕೆ ಮಾಡಲಾಗಿದೆ. ಈಗ ಸಿಎಂ ಇದ್ದಾರೆ. ಅವರನ್ನು ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಸಿಎಂ ವಿಚಾರದಲ್ಲಿ ವಿವಿಧ ಚರ್ಚೆಗಳು ನಡೆಯುತ್ತವೆ. ಚರ್ಚೆ ಆದ ಮಾತ್ರಕ್ಕೆ ಮುಖ್ಯಮಂತ್ರಿ ಬದಲು ಮಾಡಲು ಸಾಧ್ಯವಿಲ್ಲ. ಸಿಎಂ ಆಕಾಂಕ್ಷಿಗಳು ಹಲವು ಜನರಿದ್ದಾರೆ. ಹೈಕಮಾಂಡ್ ನಿರ್ಧಾರ ಅಂತಿಮವಾಗಿದೆ ಎಂದರು.
ಅಹಿಂದ ನಾಯಕರ ಸಭೆ ನಡೆಸಿದ ಜಾರಕಿಹೊಳಿ
ಉತ್ತರ ಕನ್ನಡ ಜಿಲ್ಲೆಯ ಎರಡು ದಿನದ ಪ್ರವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಅಹಿಂದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸೋಮವಾರ ಕುಮಟಾದಲ್ಲಿ ಜಿಲ್ಲೆಯ ಜನಪರ ಒಕ್ಕೂಟದ ನಾಗೇಶ ನಾಯ್ಕ, ಕಾಂಗ್ರೆಸ್ ಮುಖಂಡ ಆರ್.ಎಚ್.ನಾಯ್ಕ, ಭಟ್ಕಳದ ರಾಮಾ ಮೊಗೇರ, ಕುಮಟಾದ ಸದಾನಂದ ಹರಿಕಂತ್ರ ಹೀಗೆ ಹಲವರ ಜೊತೆ ಸಭೆ ನಡೆಸಿದರು. ಜಿಲ್ಲೆಯಲ್ಲಿ ಈ ಹಿಂದೆ ಸಿದ್ಧರಾಮಯ್ಯ ಅವರ ಅಹಿಂದ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಹಲವರೂ ಈ ಸಭೆಯಲ್ಲಿರುವುದು ವಿಶೇಷವಾಗಿತ್ತು. ಮೀನುಗಾರರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರ ಸಮಸ್ಯೆಗಳನ್ನು ಆಲಿಸಿದರು. ಅಹಿಂದ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗದೇ ಇರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
"
ಬಿಜೆಪಿ ನಾಯಕರು ಬೇರೆಯವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಈಗ ಅವರ ಎಂಎಲ್‌ಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಜೆಪಿಯವರೇ ತಮ್ಮ ಭ್ರಷ್ಟಾಚಾರಕ್ಕೆ ಸಾಕ್ಷಿ ಕೊಟ್ಟಂತಾಗಿದೆ.