ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್, ರಾಮನಗರ ಗ್ರಾಮ ಪಂಚಾಯಿತಿ ಸಿಬ್ಬಂದಿ ಅರ್ಚನಾ ಮತ್ತು ಕಮಲಾಕರ ಅವರ ತಂದ ದಾಳಿ ನಡೆಸಿತ್ತು. ಏಕ ಬಳಕೆಯ ಪ್ಲೇಟ್, ಸ್ಟ್ರಾ, ಕಪ್ ಮತ್ತು ಕ್ಯಾರಿಬ್ಯಾಗ್ ಪ್ಲಾಸ್ಟಿಕ್‌ಗಳನ್ನು ತುಂಬಿದ್ದ ಓಮ್ನಿ ವಾಹನದ ಮೇಲೆ ದಾಳಿ ನಡೆಸಿದ್ದು, 150 ಕೆಜಿ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ. 3 ಸಾವಿರ ರೂ. ದಂಡ ವಿಧಿಸಲಾಗಿದೆ.