ನಗರದ ಪ್ರಮುಖ ಬೀದಿಗಳಲ್ಲಿ ಕೆಂಪು ಬಾವುಟ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ರೈತ, ಕಾರ್ಮಿಕ, ಕೂಲಿಕಾರರ ಸಂಘಟನೆಗಳ ಪ್ರಮುಖರು. ಜಿಲ್ಲಾಧಿಕಾರಿ ಕಚೇರಿಯ ಎದುರು ಸೇರಿದರು. ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿಯ ಗೇಟ್‌ಗೆ ನುಗ್ಗಲು ಯತ್ನಿಸಿದ 40 ಪ್ರತಿಭಟನಾಕಾರರನ್ನು ಪೊಲೀಸ್ ವಾಹನದಲ್ಲಿ ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು.