ಒಂದು ವರ್ಷದಲ್ಲಿ 90 ನವಜಾತ ಶಿಶುಗಳು ಸಾವು

ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಆರೋಗ್ಯ ಮಿಷನ್‌ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಆರೋಗ್ಯ ಮಿಷನ್‌ ಸಭೆ ನಡೆಸಿದರು.
Published on
ಕಾರವಾರ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 90 ನವಜಾತ ಶಿಶುಗಳ ಮರಣವಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಆಯೋಜನೆಯಾಗಿದ್ದ ಜಿಲ್ಲಾ ಆರೋಗ್ಯ ಮಿಷನ್ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿದೆ.
2025-26 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 15,607 ಹೆರಿಗೆಗಳಾಗಿವೆ. ಅದರಲ್ಲಿ 90 ಶಿಶು ಮರಣವಾಗಿದೆ. ವಿವಿಧ ವೈದ್ಯಕೀಯ ಕಾರಣಗಳಿಂದ ತಡೆಯಲು ಸಾಧ್ಯವಿಲ್ಲದ 69 ಮರಣಗಳಾಗಿವೆ. ಇನ್ನು 21 ಮರಣಗಳು ವಿವಿಧ ಕಾರಣಗಳಿಂದ ಸಂಭವಿಸಿದೆ ಎಂದು ಆರೋಗ್ಯ ಅಽಕಾರಿಗಳು ಸಭೆಗೆ ಮಾಹಿತಿ ನೀಡಿದರು. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ, ಶಿಶು ಮರಣ ಪ್ರಮಾಣ ಕಡಿಮೆಯಾಗಿದೆ ಎಂದರು.
ನವಜಾತ ಶಿಶುಗಳ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾಽಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಹಾಗೆ ಗರ್ಭಿಣಿಯರನ್ನು ನಿಗತ ಅವಧಿಯೊಳಗೆ ನೋಂದಣಿ ಮಾಡಿಕೊಂಡು ತಾಯಿ ಕಾರ್ಡ್ ವಿತರಿಸಬೇಕು. ಗರ್ಭಿಣಿ ಮತ್ತು ಶಿಶುವಿನ ಆರೋಗ್ಯವಂತ ಬೆಳವಣಿಗೆ ಮತ್ತು ಸುರಕ್ಷಿತ ಹೆರಿಗೆಯಾಗುವ ರೀತಿಯಲ್ಲಿ ನಿಯಮಿತವಾಗಿ ತಪಾಸಣೆ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸಬೇಕು ಎಂದರು. ಗರ್ಭಿಣಿಯರಿಗೆ ನವಜಾತ ಶಿಶುವಿನ ಪಾಲನೆ ಮತ್ತು ಹಾಲುಣಿಸುವ ವಿಧಾನಗಳ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕು. ಹೆಚ್‌ಪಿವಿ ಲಸಿಕೆ ಸೇರಿದಂತೆ ವಿವಿಧ ಲಸಿಕೆಗಳನ್ನು ನೀಡುವ ಕಾರ್ಯಕ್ರಮಗಳಲ್ಲಿ ಶೇ.100 ರಷ್ಟು ಪ್ರಗತಿ ಸಾಽಸಬೇಕು. ಡಿಎಚ್‌ಒ ಡಾ.ಶಂಕರ್ ರಾವ್, ಆರ್‌ಸಿಎಚ್. ಅಽಕಾರಿ ಡಾ.ನಟರಾಜ್ ಇದ್ದರು.

24 ಗಂಟೆಯಲ್ಲಿ ಸ್ಯಾಂಪಲ್ ಸಂಗ್ರಹಿಸಿ

ಜಿಪಂ ಸಿಇಒ ಡಾ.ದಿಲೀಶ್ ಶಶಿ ಮಾತನಾಡಿ ಕೆಎಫ್‌ಡಿ ಸಂಶಯಾಸ್ಪದ ಪ್ರಕರಣಗಳಲ್ಲಿ 24 ಗಂಟೆಗಳ ಒಳಗೆ ಸ್ಯಾಂಪಲ್ ಕಲೆಕ್ಷನ್ ಮಾಡುವಂತೆ ಸೂಚಿಸಿದರು. ನಾಯಿ ಕಡಿತ ಮತ್ತು ಹಾವು ಕಡಿತಕ್ಕೆ ಸಂಬಂಧಿಸಿದ ಔಷಧಗಳ ದಾಸ್ತಾನು ಸಾಕಷ್ಟು ಸಂಖ್ಯೆಯಲ್ಲಿ ಇರುವಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net