ಕುಮಟಾ: ಭಟ್ಕಳ ಎಜುಕೇಶನ್ ಟ್ರಸ್ಟ್ ಹಾಗೂ ಗಜಾನನ ಗಣಪತಿ ಕೊಲ್ಲೆ ರಾಯ್ಕರ್ ಫೌಂಡೇಶನ್ ಆಯೋಜಿಸಿದ್ದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ, ಇಲ್ಲಿನ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆಯುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.