ಪ್ರತಿಭಟನೆಗೆ ಮುಂದಾದ ಅನುದಾನಿತ ಶಾಲಾ ಶಿಕ್ಷಕರು

ಮಾಧ್ಯಮಿಕ ಶಾಲಾ ನೌಕರರ ಸಂಘದ ಸಭೆ ನಡೆಯಿತು.
ಮಾಧ್ಯಮಿಕ ಶಾಲಾ ನೌಕರರ ಸಂಘದ ಸಭೆ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರದಿಂದ ಮಲತಾಯಿ ಧೋರಣೆ ಆರೋಪ
  • ಹಿಂದು ಹೈಸ್ಕೂಲ್‌ನಲ್ಲಿ ನಡೆದ ಸಭೆಯಲ್ಲಿ ನಿರ್ಧಾರ
ಕಾರವಾರ: ಅನುದಾನಿತ ಶಿಕ್ಷಣ ಸಂಸ್ಥೆಗಳ ಉಳಿವಿಗಾಗಿ ಜುಲೈ 18 ರಂದು ಜಿಲ್ಲಾಽಕಾರಿ ಕಚೇರಿಯ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ.
ಒಟ್ಟು 20 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲು ಹಿಂದು ಹೈಸ್ಕೂಲ್‌ನಲ್ಲಿ ನಡೆದ ಮಾಧ್ಯಮಿಕ ಶಾಲಾ ನೌಕರರ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಘದ ಕಾರ್ಯದರ್ಶಿ ಎಲ್.ಎಂ.ಹೆಗಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ÷್ಯ ಪೂರ್ವದಿಂದ ಸೇವೆ ಸಲ್ಲಿಸುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಇದರಿಂದ ವಿವಿಧ ಸಂಸ್ಥೆಗಳು ನಿರಂತರವಾಗಿ ಮುಚ್ಚುತ್ತಿವೆ. ಈ ಕಾರಣ ಪ್ರತಿಭಟನೆಗೆ ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2015ರ ನಂತರ ಖಾಲಿಯಾದ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.ಮುಂದೆ ಹುದ್ದೆ ಖಾಲಿಯಾದ ದಿನದಿಂದಲೇ ಭರ್ತಿ ಮಾಡಲು ಕ್ರಮ ವಹಿಸಬೇಕು. ಭರ್ತಿಯಾಗುವವರೆಗೆ ಸರ್ಕಾರವೇ ಅತಿಥಿ ಶಿಕ್ಷಕರನ್ನು ನೇಮಿಸಬೇಕು. ಗುಡ್ಡಗಾಡು, ಕರಾವಳಿ, ಗಡಿನಾಡು, ಮಲೆನಾಡು ಪ್ರದೇಶಗಳಲ್ಲಿ ಶಿಕ್ಷಕ-ವಿದ್ಯಾರ್ಥಿ ಅನುಪಾತವನ್ನು 1:15 ಕ್ಕೆ ಇಳಿಸಬೇಕು. 2006ರ ನಂತರ ನೇಮಕಗೊಂಡು ನಿವೃತ್ತರಾದ ಅನುದಾನಿತ ಶಾಲಾ ಶಿಕ್ಷಕರಿಗೆ ಪಿಂಚಣಿ ನೀಡಬೇಕು. ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಿಕ್ಷಕರಿಗೂ ಒಂದೇ ಆದೇಶದಲ್ಲಿ ನೀಡಬೇಕು. ಕಾಲ್ಪನಿಕ ವೇತನ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು. 1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಅನುದಾನಿತ ಪ್ರೌಢಶಾಲೆಗಳಿಗೆ ವೇತನಾನುದಾನ ಮಂಜೂರು ಮಾಡಬೇಕು. ಶೇ.100 ಫಲಿತಾಂಶ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೂ ಸರ್ಕಾರಿ ಶಾಲೆಗಳಂತೆ ಗೌರವ ಸಂಭಾವನೆ ನೀಡಬೇಕು.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡುವ ಎಲ್ಲ ಸೌಲಭ್ಯವನ್ನು ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ವಿದ್ಯಾರ್ಥಿಗಳಿಗೂ ನೀಡಬೇಖು. ಸ್ಯಾಟ್ಸ್, ಯೂಡೈಸ್ ಅಪ್ಡೇಟ್ ಶುಲ್ಕವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಎಸ್‌ಎಸ್‌ಎಲ್‌ಸಿ ಪೂರ್ವ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮುದ್ರಣ ಶುಲ್ಕ, ಶಾಲಾ ನಿರ್ವಹಣಾ ಶುಲ್ಕವನ್ನು ಶಾಲೆಗಳಿಗೆ ನೀಡಬೇಕು. ಅನುದಾನಿತ ಶಾಲೆಯ 3 ಕಿಮೀ ವ್ಯಾಪ್ತಿಯಲ್ಲಿ ಕೆಪಿಎಸ್ ಶಾಲೆ ಮಾಡಬಾರದು. ಅನುದಾನಿತ ಶಾಲೆಗಳಿಗೂ ದ್ವಿಭಾಷಾ ನೀತಿ ವಿಸ್ತರಿಸಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಪಟ್ಟಿ ಸಿದ್ಧಪಡಿಸಲಾಯಿತು.
ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಬಂಟ್, ಕಾರವಾರ ತಾಲೂಕು ಅಧ್ಯಕ್ಷ ಜೈ ರಂಗನಾಥ,ಅAಕೋಲಾ ಘಟಕದ ಗಣಪತಿ ನಾಯಕ, ಎಂಡಿ ಕುಂಶಿ,ಸÀAದೀಪ್ ರಾಣೆ, ಕಾರವಾರದ ಆರ್. ವಿ. ದೇಶಬಂಡಾರಿ,ಶಮಿAದ್ರ ನಾಯಕ, ಗಣೇಶ ಬಿಷ್ಟಣ್ಣನವರ, ಸಂಜಯ ನಾಯ್ಕ, ಮಹದೇವ ರಾಣೆ ವೇದಿಕೆಯ ಮೇಲಿದ್ದರು.
........
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net