ಭಾರಿ ಮಳೆಯಿಂದ ಗ್ರಾಮೀಣ ಭಾಗದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಕೆಲ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಹಲವು ಕಡೆಗಳಲ್ಲಿ ಕೃಷಿ ಭೂಮಿಗಳು ನೀರಿನಲ್ಲಿ ಮುಳುಗಿದ್ದು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಬಿರುಗಾಳಿಯೊಂದಿಗೆ ಸುರಿದ ಮಳೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಅನೇಕ ಗ್ರಾಮಗಳು ಕತ್ತಲಲ್ಲಿ ಮುಳುಗಿದ್ದು, ಗ್ರಾಮೀಣ ಪ್ರದೇಶದ ನಿವಾಸಿಗಳು ಪರದಾಡುವಂತಾಗಿದೆ.