ಈ ಕುರಿತು ವಲಯ ಅರಣ್ಯಾಧಿಕಾರಿ ವಿಶ್ವನಾಥ ನಾಯ್ಕ ಮಾತನಾಡಿ, ಮಾಹಿತಿ ಲಭ್ಯವಾದ ತಕ್ಷಣ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಉಪಟಳ ನೀಡಿದ ಮಂಗವನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಅದು ಬೇರೆ ಮಂಗಗಳ ಗುಂಪಿಗೆ ಸೇರಿಕೊಂಡಿರುವುದರಿಂದ ಕಾರ್ಯಾಚರಣೆಗೆ ತೊಂದರೆಯಾಗಿದೆ. ಸಾರ್ವಜನಿಕರು ಮಂಗ ಕಂಡುಬಂದ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.