ಪಲ್ಟಿಯಾಗಿ ರಸ್ತೆಗೆ ಅಡ್ಡಲಾಗಿ ಬಿದ್ದ ಬಸ್

ಅಂಕೋಲಾ ಬಳಿ ಬಸ್ ಪಲ್ಟಿಯಾಗಿದೆ.
ಅಂಕೋಲಾ ಬಳಿ ಬಸ್ ಪಲ್ಟಿಯಾಗಿದೆ.
Published on
ಅಂಕೋಲಾ: ಖಾಸಗಿ ಬಸ್ ಪಲ್ಟಿಯಾಗಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಶನಿವಾರ ಬೆಳಗಿನಜಾವ ಸಂಭವಿಸಿದೆ.
ಬಳ್ಳಾರಿಯಿಂದ ಗೋವಾಕ್ಕೆ ಬರುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್ ಯಲ್ಲಾಪುರ-ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಲೂರು ಕಂಚಿನ ಬಾಗಿಲಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಘಟನೆಯಲ್ಲಿ ಒಬ್ಬ ಪ್ರಯಾಣಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. 6 ಜನ ತೀವ್ರವಾಗಿ ಗಾಯಗೊಂಡಿದ್ದು ಕಾರವಾರ ಕ್ರಿಮ್ಸ್ ಗೆ ಸಾಗಿಸಲಾಗಿದೆ. 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಕೋಲಾ ಹಾಗೂ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು. ಚಿತ್ರದುರ್ಗದ ಮೊಹಮದ್ ಇಲಿಯಾಸ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಸಂಚಾರ ಬಂದ್

ಬಸ್ ಹೆದ್ದಾರಿಗೆ ಅಡ್ಡವಾಗಿ ಬಿದ್ದಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ ಎರಡೂ ಕಡೆ ನೂರಾರು ವಾಹನಗಳು ನಿಂತಿವೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net