suspended ಚಿಗಳ್ಳಿ ಸರ್ಕಾರಿ ಶಾಲೆ ಶಿಕ್ಷಕ ಅಮಾನತು

ದಾಸಪ್ಪ ಎ,, ಶಿಕ್ಷಕ
ದಾಸಪ್ಪ ಎ,, ಶಿಕ್ಷಕ
Published on
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ದಾಸಪ್ಪ ಎ. ಅವರನ್ನು ಅಮಾನತು suspended ಮಾಡಿ ಶಿರಸಿ ಡಿಡಿಪಿಐ ದಯಾನಂದ ನಾಯ್ಕ ಆದೇಶ ಹೊರಡಿಸಿದ್ದಾರೆ.
ಶಿಕ್ಷಕ ದಾಸಪ್ಪ ಮಕ್ಕಳಿಗೆ ಸರಿಯಾಗಿ ಪಾಠ ಮಾಡದಿರುವುದು, ಶಾಲೆಯ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸುವುದು ಹಾಗೂ ಶಿಕ್ಷಕಿಯರಿಗೆ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಎಸ್‌ಡಿಎಂಸಿ ಸದಸ್ಯರು, ಪಾಲಕರು ಹಾಗೂ ಗ್ರಾಮಸ್ಥರು ನ. 10ರಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಡಿಡಿಪಿಐ ದಯಾನಂದ ಆರ್. ನಾಯ್ಕ ಅವರಿಗೆ ಮನವಿ ಸಲ್ಲಿಸಿದ್ದರು.
ಅಲ್ಲದೆ, ಶಿಕ್ಷಕ ದಾಸಪ್ಪ ವಿರುದ್ಧ ಶಿಕ್ಷಕಿಯರು ಮಹಿಳಾ ದೌರ್ಜನ್ಯ ಪ್ರಕರಣ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಕೊಲೆ ಬೆದರಿಕೆ ದೂರು ದಾಖಲಿಸಿದ್ದರು.
ಶಿಕ್ಷಕ ದಾಸಪ್ಪ ಕೂಡ ಶಿಕ್ಷಕಿಯರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರ ವಿರುದ್ಧ ಜಾತಿ ನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಹೀಗೆ ಶಾಲೆಯ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕಿಯರು ಹಾಗೂ ಪಾಲಕರಿಂದ ಹಲವು ಬಾರಿ ದೂರುಗಳು ಬಂದ ಹಿನ್ನಲೆ ಶಿಕ್ಷಕ ದಾಸಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net