ಪೌರ ಕಾರ್ಮಿಕರ ಮನೆ ಕಳಪೆ: ತನಿಖೆಗೆ ಆಯೋಗ ಆದೇಶ

ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಅವರು ಸಭೆ ನಡೆಸಿದರು.
ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಅವರು ಸಭೆ ನಡೆಸಿದರು.
Published on
ಗೃಹಭಾಗ್ಯ ಯೋಜನೆಯಡಿ ವಸತಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕಾರವಾರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಹಾಗೂ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ
ಮಾತನಾಡಿದರು.
ಪೌರಕಾರ್ಮಿಕರಿಗೆ ಮನೆಯನ್ನು ಒದಗಿಸುವುದು ಎಲ್ಲಾ ನಗರಸ್ಥಳಿಯ ಸಂಸ್ಥೆಗಳ ಪ್ರಮುಖ ಕರ್ತವ್ಯವಾಗಿದ್ದು, ಜಿಲ್ಲೆಯಲ್ಲಿ ಗೃಹಭಾಗ್ಯ ಯೋಜನೆಯಡಿಯಲ್ಲಿ ಪೌರಕಾರ್ಮಿಕರಿಗೆ ಈಗಾಗಲೇ ನಿರ್ಮಾಣಗೊಂಡಿರುವ ಮನೆಗಳನ್ನು ತಕ್ಷಣವೇ ಹಸ್ತಾಂತರಿಸುವಂತೆ ಮತ್ತು ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಶೀಘ್ರದಲ್ಲಿ ಕಾಮಗಾರಿ ಮುಕ್ತಾಯಗೊಳಿಸಿ ಹಂಚಿಕೆ ಮಾಡಬೇಕು. ಮನೆಗಳ ನಿರ್ಮಾಣದಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಇದರಲ್ಲಿ ನಿರ್ಲಕ್ಷö್ಯ ತೋರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಹಾಗೂ ಈಗಾಗಲೇ
ನಿರ್ಮಿಸಿರುವ ಮನೆಗಳ ಸುರಕ್ಷತೆ ಮತ್ತು ಗುಣಮಟ್ಟ ಕುರಿತಂತೆ ಪ್ರತ್ಯೇಕ ತನಿಖೆ ನಡೆಸುವಂತೆ ತಿಳಿಸಿದ ಅವರು, ಪೌರಕಾರ್ಮಿಕರ ಮನೆ ನಿರ್ಮಾಣಕ್ಕೆ ಜಾಗದ ಕೊರತೆಯ ಸಮಸ್ಯೆಯ ನೆಪ ಹೇಳದೇ ಆದ್ಯತೆಯಲ್ಲಿ ಎಲ್ಲರಿಗೂ ಮನೆ ನಿರ್ಮಾಣ ಮಾಡಿಕೊಡುವಂತೆ ನಿರ್ದೇಶನ ನೀಡಿದರು.
ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಬಳಕೆ ಮಾಡುವಂತೆ ಸೂಚಿಸಿದ ಅವರು, ಕಾರ್ಮಿಕರಿಗೆ ನಿಯಮಿತ ಆರೋಗ್ಯ ತಪಾಸಣೆ, ದೈನಂದಿನ ಉಪಹಾರ, ಸಂಕಷ್ಟ ಭತ್ಯೆ, ಸುರಕ್ಷತಾ ಉಪಕರಣಗಳನ್ನು ನೀಡಬೇಕು. ಸಕಾಲದಲ್ಲಿ ವೇತನ ಪಾವತಿಸಬೇಕು, ಸ್ಯಾಲರಿ ಸ್ಲಿಪ್ ನೀಡಬೇಕು, ಗುತ್ತಿಗೆ ಕಾರ್ಮಿಕರಿಗೆ ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು ಇದರಲ್ಲಿ ವ್ಯತ್ಯಯ ಕಂಡುಬಂದಲ್ಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದರು.
ದಾಂಡೇಲಿ ನಗರಸಭೆ ವ್ಯಾಪ್ತಿಯಲ್ಲಿ ಬೆಳಗಿನ ಉಪಹಾರ ನೀಡುವ ಯೋಜನೆಯಲ್ಲಿ ಪೌರಕಾರ್ಮಿಕರಿಗೆ 2 ತಿಂಗಳಿAದ ಉಪಹಾರ ನೀಡದ ಬಗ್ಗೆ ಪರಿಶೀಲಿಸಿದ ಅವರು, ಗುತ್ತಿಗೆದಾರರ ಸಮಸ್ಯೆಯಿಂದ ಕಾರ್ಮಿಕರಿಗೆ ತೊಂದರೆಯಾಗಬಾರದು, ಕೂಡಲೇ ಟೆಂಡರ್‌ದಾರರನ್ನು ಬದಲಾಯಿಸಿ ನಾಳೆಯಿಂದಲೇ ಕಾರ್ಮಿಕರಿಗೆ ಉಪಹಾರ ಒದಗಿಸಬೇಕು ಮತ್ತು ಎರಡು ತಿಂಗಳ ಭತ್ಯೆಯನ್ನು ನಗದಾಗಿ ಕಾರ್ಮಿಕರಿಗೆ ವಿತರಿಸುವಂತೆ ನಿರ್ದೇಶನ ನೀಡಿದರು.
ಪೌರಕಾರ್ಮಿಕರಾಗಿ ಖಾಯಂ ನೇಮಕಗೊಂಡ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರ ಬಗ್ಗೆ ದೂರುಗಳು ಬರುತ್ತಿದ್ದು, ಕೆಲಸದ ವಿಷಯದಲ್ಲಿ ತಾರತಮ್ಯ ಮಾಡದೇ ಏಕರೂಪದ ಕೆಲಸ ನಿರ್ವಹಣೆ ಮಾಡುವಂತೆ ಸೂಚಿಸಿದ ಅವರು, ರೇನ್ ಕೋಟ್ ಗಳನ್ನು ಮಳೆಗಾಲದ ಮುಂಚೆಯೇ
ವಿತರಿಸಬೇಕು. ನಿವೃತ್ತ ಕಾರ್ಮಿಕರಿಗೆ ನಿವೃತ್ತಿ ಸೌಲಭ್ಯಗಳು ದೊರೆಯುವಲ್ಲಿ ವಿಳಂಬವಾಗದAತೆ ಅವರ ದಾಖಲೆಗಳನ್ನು ವ್ಯವಸ್ಥಿತ ರೀತಿಯಲ್ಲಿ ದಾಖಲಿಸುವಂತೆ ಮತ್ತು ಖಾಯಂ ನೇಮಕಾತಿ ಸಮಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವವರಿಗೆ ಆದ್ಯತೆ ನೀಡುವಂತೆ ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಪೌರಕಾರ್ಮಿಕರಿಗೆ ಸಫಾಯಿ ಕರ್ಮಚಾರಿ ಅಭಿವೃಧ್ದಿ ನಿಗಮದ ಮತ್ತು ವಿವಿಧ ನಿಗಮಗಳ ಮೂಲಕ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸುವಂತೆ ಮತ್ತು ಜಿಲ್ಲೆಗೆ ನಿಗಧಿಪಡಿಸಿರುವ ಗುರಿಯನ್ನು ಮತ್ತು ಅನುದಾನವನ್ನು ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸುವ ಮೂಲಕ ಸರ್ಕಾರದ ಯೋಜನೆಗಳ ಹೆಚ್ಚಿನ ನೆರವು ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು, ನವೆಂಬರ್ 7 ರಂದು ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತಪ್ಪದೇ ಮಾಡಬೇಕು ಎಂದರು. ರಾಜ್ಯದ ಪೌರಕಾರ್ಮಿಕರಿಗೆ 1200 ಚದುರ ಅಳತೆಯಲ್ಲಿ ಮನೆ ನಿರ್ಮಾಣ, ಉಪಹಾರ ಭತ್ಯೆಯ ಮೊತ್ತ ರೂ.50 ಕ್ಕೆ ಏರಿಕೆ, ಆರೋಗ್ಯ ಕಾರ್ಡ್, ಸರಕಾರಿ ನೌಕರರಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ಒದಗಿಸುವ ಕುರಿತಂತೆ ಆಯೋಗದಿಂದ ಪೌರಾಡಳಿತ ನಿರ್ದೇಶನಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾತನಾಡಿ, ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ ಪದ್ದತಿ ಇಲ್ಲ. ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಬಳಸಲಾಗುತ್ತಿದೆ. ನಿಯಮಿತವಾಗಿ ಸಫಾಯಿ ಕರ್ಮಚಾರಿಗಳ ಕುರಿತು ಸಭೆ ನಡೆಸಲಾಗುತ್ತಿದ್ದು, ಅವರ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತಿದೆ. ಮನೆಗಳ ನಿರ್ಮಾಣ ಮತ್ತು ಹಂಚಿಕೆ ಕುರಿತ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಪೂರ್ಣಗೊಂಡ ಮನೆಗಳನ್ನು ಹಸ್ತಾಂತರ ಮಾಡಲಾಗುವುದು. ಮನೆಗಳ ಕಾಮಗಾರಿಯ ಗುಣಮಟ್ದ ಕುರಿತಂತೆ ಪರಿಶೀಲನೆ ಮಾಡಲಾಗುವುದು, ಎಲ್ಲಾ ಪೌರಕಾರ್ಮಿಕರಿಗೆ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸಿದ್ದ ಪೌರಕಾರ್ಮಿಕರು ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ವಿವರಿಸಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಆಯೋಗದ ಸದಸ್ಯ ಶಂಕರ್, ಸಂಶೋಧನಾ ಅಧಿಕಾರಿ ಮಹಾದೇವ ಸ್ವಾಮಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ (ಪ್ರಭಾರ) ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿಗಳಾದ ಚಂದ್ರಶೇಖರ್, ಮಹೇಶ್, ಹೆಚ್ಚವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ , ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ಎಲ್ಲಾ
ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು/ ಮುಖ್ಯಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net