

ಕಾರವಾರ: ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಸಂಸದ ನಳಿನಕುಮಾರ್ ಕಟೀಲ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯ ಸಂಸ್ಥೆಗಳ ಮೇಲಿನ ವಿಶ್ವಾಸಕ್ಕೆ ಧಕ್ಕೆಯಾಗದಂತೆ ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಆದರೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಕಾರ್ಯವೈಖರಿ ಕುರಿತು ಜನರಲ್ಲಿ ಅನುಮಾನ ಮೂಡಿಸುವ ರೀತಿಯಲ್ಲಿ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ ಎಂದರು.
ರಾಜಕೀಯ ಭಿನ್ನಾಭಿಪ್ರಾಯಗಳ ಹೆಸರಿನಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವುದು ಸರಿಯಲ್ಲ ಎಂಬುದು ಬಿಜೆಪಿಯ ನಿಲುವಾಗಿದೆ. ವಿಪಕ್ಷ ನಾಯಕ ರಾಹುಲ್ ಗಾಂಽ ಹಾಗೂ ಇಂಡಿ ಮಿತ್ರ ಪಕ್ಷಗಳ ನಾಯಕರು, ಸಿಬಿಐ, ಜಾರಿ ನಿರ್ದೇಶನಾಲಯ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ಮತ್ತು ಆದಾಯ ತೆರಿಗೆ ಇಲಾಖೆಗಳ ಕುರಿತು ಮಾಡುತ್ತಿರುವ ಟೀಕೆಗಳು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಎಸ್ಐಆರ್ ಮತ್ತು 'ವೋಟ್ ಚೋರಿ' ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಕಾಂಗ್ರೆಸ್ ಆರೋಪಗಳಿಗೆ ಸಂಬAಽಸಿದAತೆ ಸೂಕ್ತ ದಾಖಲೆಗಳನ್ನು ಸಾರ್ವಜನಿಕವಾಗಿ ಮಂಡಿಸಬೇಕು ಎಂದು ಕಟೀಲ್ ಒತ್ತಾಯಿಸಿದರು. ಕಾಂಗ್ರೆಸ್ನ ಚುನಾವಣಾ ಹಿನ್ನಡೆಗೆ ಎಸ್ಐಆರ್ ಕಾರಣ ಎಂಬ ವಾದವನ್ನು ತಳ್ಳಿಹಾಕಿದ ಅವರು, ಹಲವು ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಸಾಧನೆ ಕುಸಿದಿರುವುದಕ್ಕೆ ಪಕ್ಷದ ರಾಜಕೀಯ ನಿಲುವುಗಳು ಮತ್ತು ಸಂಘಟನಾತ್ಮಕ ಸವಾಲುಗಳೂ ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟರು.
ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಮಾಜಿ ಶಾಸಕ ಸುನೀಲ ಹೆಗಡೆ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ಸುದ್ದಿಗೋಷ್ಠಿಯಲ್ಲಿದ್ದರು.