ಚರ್ಚೆಯಲ್ಲಿ ಪಾಲ್ಗೊಳ್ಳುವಂತಿಲ್ಲ
ಕಾರವಾರ ಶಾಸಕ ಸತೀಶ ಸೈಲ್ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದರೂ ಕ್ಷೇತ್ರದ ಅಭಿವೃದ್ಧಿ ಕಾರ್ಯ ಕುಂಠಿತ ಮಾಡಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ಶಂಭು ಶೆಟ್ಟಿ ಹೇಳಿದರು.
ಅಕ್ರಮ ಅದಿರು ಪ್ರಕರಣದಲ್ಲಿ ಅವರ ವಿಚಾರ ನ್ಯಾಯಾಲಯ ವಿಚಾರಣೆ ನಡೆಯುತ್ತಿದೆ. ಸತೀಶ ಸೈಲ್ ಅವರು ಶಾಸಕರಾಗಿ ಅಧಿವೇಶದನದಲ್ಲಿ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವಂತಿಲ್ಲ(ಡೆಲಿಬರೇಶನ್), ಭತ್ಯೆ ಪಡೆಯುವಂತಿಲ್ಲ ಎಂದು ನ್ಯಾಯಾಲಯ ಆದೇಶ ನೀಡಿದೆ. ಆದರೆ, ಶಾಸಕರ ಜವಾಬ್ದಾರಿ ನಿರ್ವಹಿಸಲು ಯಾವುದೇ ಆಕ್ಷೇಪಣೆ ಇಲ್ಲ. ಎಂದು ಶಂಭು ಶೆಟ್ಟಿ ವಿವರಿಸಿದರು.