

ಮುಂಡಗೋಡ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಬೋರವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿ, ಕುಡಿಯುವ ನೀರು ಪೂರೈಕೆ ಸಮಸ್ಯೆಯಾಗಿತ್ತು. ತಕ್ಷಣ ಗ್ರಾಮ ಪಂಚಾಯಿತಿ ವತಿಯಿಂದ ಖಾಸಗಿ ಬೋರವೆಲ್ ಬಾಡಿಗೆ ಪಡೆದು ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಮತ್ತಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿದ್ದು, ಆದ್ದರಿಂದ ಮುಂಜಾಗ್ರತವಾಗಿ ಖಾಸಗಿ ಬೋರವೆಲ್ ಗಳನ್ನ ಗುರುತಿಸಲಾಗಿದೆ.
> ರಾಜೇಶ್ವರಿ ಕದಂ, ಇಂಜಿನಿಯರ್, ಕುಡಿಯುವ ನೀರು ಸರಬರಾಜು ಇಲಾಖೆ