ಮಾದಕ ವಸ್ತು ತಡೆಗೆ ಪೋಸ್ಟಲ್‌ ಪಾರ್ಸಲ್‌ಗಳನ್ನು ಪರಿಶೀಲಿಸಲು ಡಿಸಿ ಸೂಚನೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಎನ್‌ ಕಾರ್ಡ್‌ ಸಮಿತಿ ಸಭೆ ನಡೆಯಿತು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಎನ್‌ ಕಾರ್ಡ್‌ ಸಮಿತಿ ಸಭೆ ನಡೆಯಿತು
Published on
ಕಾರವಾರ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಬಳಕೆಯ ಕುರಿತಂತೆ ಅನುಮಾನಾಸ್ಪದ ಸ್ಥಳಗಳಲ್ಲಿ ಸಂಬAಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತೀವ್ರಗತಿಯಲ್ಲಿ ವ್ಯಾಪಕವಾಗಿ
ತಪಾಸಣೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್‌ಕಾರ್ಡ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾದಕ ವಸ್ತುಗಳ ಮತ್ತು ಸರಬರಾಜು ತಡೆಯಲು ಪೊಲೀಸ್ ಇಲಾಖೆ ಸೇರಿದಂತೆ ಎನ್‌ಕಾರ್ಡ್ ಸಮಿತಿಯಲ್ಲಿನ ಎಲ್ಲಾ
ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ತಪಾಸಣೆಗಳನ್ನು ನಡೆಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪ್ರತೀ ತಿಂಗಳು ನಡೆಸಿದ ತಪಾಸಣೆಗಳು ಮತ್ತು ವಶಪಡಿಸಿಕೊಂಡ ಮಾದಕ ವಸ್ತುಗಳ ಪ್ರಮಾಣದ ಕುರಿತಂತೆ ಸಂಪೂರ್ಣ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಪದವಿ
ಪೂರ್ವ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯ ಮೀನುಗಾರಿಕಾ ಬಂದರು, ಪೋರ್ಟ್ ಮತ್ತು ಬೀಚ್‌ನಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಸೇವನೆ ಕುರಿತಂತೆ ತಪಾಸಣೆಗಳನ್ನು ನಡೆಸುವಂತೆ ಹಾಗೂ ಅರಣ್ಯದಲ್ಲಿ ಮತ್ತು ಕೃಷಿ ಜಮೀನಿನಲ್ಲಿ ಬೆಳೆಯಬಹುದಾದ ಮಾದಕ ಗಿಡಗಳ ಕುರಿತಂತೆ ಅರಣ್ಯ ಮತ್ತು ಕೃಷಿ ಇಲಾಖೆಯಿಂದ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ಅಂಚೆ ಇಲಾಖೆಯಲ್ಲಿ ಸ್ವೀಕೃತವಾಗುವ ಅನುಮಾನಾಸ್ಪದ ಪಾರ್ಸೆಲ್‌ಗಳನ್ನು ನಿರಂತರವಾಗಿ ಮತ್ತು ಇತರೆ ಪಾರ್ಸೆಲ್‌ಗಳನ್ನು ಆಗಾಗ್ಗೆ ತಪಾಸಣೆ ನಡೆಸುವಂತೆ ಮತ್ತು ಕೋರಿಯರ್ ಸಂಸ್ಥೆಗಳ ಮೂಲಕ ನಡೆಯುವ ಪಾರ್ಸೆಲ್‌ಗಳನ್ನು ಪರಿಶೀಲಿಸುವಂತೆ ಸೂಚಿಸಿದ ಅವರು, ಮಾದಕ ವಸ್ತುಗಳ ಕುರಿತು ತಪಾಸಣೆಗಳನ್ನು ನಡೆಸುವ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಪೊಲೀಸ್ ಇಲಾಖೆಯ ಶ್ವಾನದಳದ ನೆರವು ಪಡೆಯುವಂತೆ ನಿರ್ದೇಶನ ನೀಡಿದರು.
ಪೊಲೀಸ್, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಅಬಕಾರಿ, ಮೀನುಗಾರಿಕೆ, ಬಂದರು ಸೇರಿದಂತೆ ಎಲ್ಲಾ
ಇಲಾಖೆಗಳು ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತ ಕಾರ್ಯದಲ್ಲಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕೋಸ್ಟ್
ಗಾರ್ಡ್, ಕರಾವಳಿ ಕಾವಲು ಪೊಲೀಸ್, ಅಬಕಾರಿ, ಮೀನುಗಾರಿಕೆ, ಬಂದರು, ಶಿಕ್ಷಣ, ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net