ಸಂಘದ ಅಧ್ಯಕ್ಷ ಡಿ.ಜಿ. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ ಸ್ವೀಕರಿಸಿದ ನಿವೃತ್ತ ನೌಕರ ಶ್ರೀಪಾದ ಹೆಗಡೆ, ಸಾಧಕಿ ರೇಖಾ ಭಟ್ಟ, ಭವ್ಯಾ ಭಾಗ್ವತ ಅನಿಸಿಕೆ ವ್ಯಕ್ತಪಡಿಸಿದರು. ಶಾರದಾಂಬಾ ದೇವಸ್ಥಾನದ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಸಂಕಲ್ಪ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ಶಾರದಾಂಬಾ ಪಾಠಶಾಲೆಯ ಅಧ್ಯಕ್ಷ ಉಮೇಶ ಭಾಗ್ವತ, ಹವ್ಯಕ ಭವನ ಕಟ್ಟಡ ಸಮಿತಿ ಅಧ್ಯಕ್ಷ ಮಾರುತಿ ಘಟ್ಟಿ ಮಾತನಾಡಿದರು. ಲೆಕ್ಕ ಪರಿಶೋಧಕ ವಿಘ್ನೇಶ್ವರ ಗಾಂವ್ಕರ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ಎಸಿಎಫ್ ಹಿಮವತಿ ಭಟ್ಟ, ಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್.ಹೆಗಡೆ ಉಪಸ್ಥಿತರಿದ್ದರು.