ಭಟ್ಕಳ: ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಪಟ್ಟಣದ ಆಸರಕೇರಿ ನಿಚ್ಚಲಮಕ್ಕಿ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ಮಕ್ಕಳಿಗೆ ಎರಡು ಹನಿ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪೋಲಿಯೋ ರೋಗ ಸಂಪೂರ್ಣ ನಿರ್ಮೂಲನೆಗಾಗಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದು, ಅಭಿಯಾನ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಐದು ವರ್ಷ ಒಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಮನೆಮನೆಗೂ ಲಸಿಕೆ ತಲುಪಿಸಲಾಗುತ್ತಿದೆ ಎಂದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.