ಪ್ರತಿಷ್ಠಾಪನೆ ಸುವರ್ಣ ಮಹೋತ್ಸವ ಸಂಪನ್ನ

ದಾಂಡೇಲಿಯ ಟೌನಶಿಪ್‌ನಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮೃತ್ತಿಕಾ ವೃಂದಾವನ ಪ್ರತಿಷ್ಠಾಪನೆಯ ಸುವರ್ಣ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು.
ದಾಂಡೇಲಿಯ ಟೌನಶಿಪ್‌ನಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮೃತ್ತಿಕಾ ವೃಂದಾವನ ಪ್ರತಿಷ್ಠಾಪನೆಯ ಸುವರ್ಣ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು.
Published on
ದಾಂಡೇಲಿ: ನಗರದ ಟೌನಶಿಪ್‌ನಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮೃತ್ತಿಕಾ ವೃಂದಾವನ ಪ್ರತಿಷ್ಠಾಪನೆಯ ಸುವರ್ಣ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಸಂಪನ್ನಗೊಂಡಿತು. ಭಾನುವಾರ ಅಷ್ಟೋತ್ತರ, ಪಂಚಾಮೃತ, ಸುದರ್ಶನ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಜರುಗಿತು. ಮಧ್ಯಾಹ್ನ ಪಲ್ಲಕ್ಕಿ, ಗಜವಾಹನ, ರಥೋತ್ಸವ ಸೇವೆ ಜರುಗಿತು. ಆ ಬಳಿಕ ಮಹಾಮಂಗಳಾರತಿ ಮತ್ತು ಮಹಾಪ್ರಸಾದ ವಿತರಣೆ ಜರುಗಿತು. ಶ್ರೀ ರಾಘವೇಂದ್ರ ಮಠದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net