ಶ್ರೀಗಳ ಭವ್ಯ ಮೆರವಣಿಗೆ

ಮುಂಡಗೋಡ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳ ಭವ್ಯ ಮೆರವಣಿಗೆ ನಡೆಯಿತು.
ಮುಂಡಗೋಡ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳ ಭವ್ಯ ಮೆರವಣಿಗೆ ನಡೆಯಿತು.
Published on
ಮುಂಡಗೋಡ: ದೈವಜ್ಞ ದರ್ಶನ ಹಾಗೂ ಸಭಾಭವನದ ರಜತ ಮಹೋತ್ಸವ ಅಂಗವಾಗಿ ಪಟ್ಟಣದಲ್ಲಿ ಭಾನುವಾರ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳ ಭವ್ಯ ಮೆರವಣಿಗೆ ನಡೆಯಿತು. ಇದಕ್ಕೂ ಮುನ್ನ ಪ್ರವಾಸಿ ಮಂದಿರದಿಂದ ಬೈಕ್ ರ‌್ಯಾಲಿ ಆರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಳೂರ ಶ್ರೀ ಮಾರಿಕಾಂಬಾ(ದ್ಯಾಮವ್ವಾ) ದೇವಸ್ಥಾನ ತಲುಪಿತು. ಅಮ್ಮನವರಿಗೆ ಪೂಜೆ ಸಲ್ಲಿಸಿದ ನಂತರ ಮಹಿಳೆಯರಿಂದ ಪೂರ್ಣ ಕುಂಭ, ಚಂಡೆ ವಾದ್ಯದೊಂದಿಗೆ ಸಾಗಿದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳ ಭವ್ಯ ಮೆರವಣಿ ಸಂಚರಿಸಿ ದೈವಜ್ಞ ಸಭಾಭವನ ತಲುಪಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net