Har Ghar Tiranga ಹರ್ ಘರ್ ತಿರಂಗಾ ಅಭಿಯಾನ 12ರಿಂದ

ಯಲ್ಲಾಪುರದ ಬಿಜೆಪಿ ಕಾರ್ಯಾಲಯದಲ್ಲಿ Har Ghar Tiranga ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಪತ್ರಕರ್ತರಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.
ಯಲ್ಲಾಪುರದ ಬಿಜೆಪಿ ಕಾರ್ಯಾಲಯದಲ್ಲಿ Har Ghar Tiranga ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಪತ್ರಕರ್ತರಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.
Published on
ಯಲ್ಲಾಪುರ: ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹರ್ ಘರ್ ತಿರಂಗಾ Har Ghar Tiranga ಅಭಿಯಾನದ ಅಂಗವಾಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.
ಧ್ವಜ ವಿತರಿಸಿ ಮಾತನಾಡಿದ ಪಕ್ಷದ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ಆ. 12ರಿಂದ 15 ರವರೆಗೆ ಮನೆ ಮನೆಗಳಲ್ಲಿ ರಾಷ್ಟ್ರಧ್ವ್ವಜ ಹಾರಾಡಬೇಕು ಎಂಬುದು ಅಭಿಯಾನದ ಉದ್ದೇಶ. ಜಿಲ್ಲೆಯಲ್ಲಿ ರೂಪಾಲಿ ನಾಯ್ಕ ಅವರ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದೆ ಎಂದರು.
ತಾಲೂಕಿನಲ್ಲೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆ.12 ರಂದು ಸಂಜೆ 5 ಕ್ಕೆ ಕಿರವತ್ತಿಯಲ್ಲಿ ರಾಷ್ಟ್ರಧ್ವಜದೊಂದಿಗೆ ಬೈಕ್ ರ‌್ಯಾಲಿ, ಆ.13 ರಂದು ಉಮ್ಮಚಗಿಯಲ್ಲಿ ಬೈಕ್ ರ‌್ಯಾಲಿ ನಡೆಯಲಿದೆ.
ಆ.14 ರಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದೇಶ ವಿಭಜನೆಯ ಇತಿಹಾಸದ ಕುರಿತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉಪನ್ಯಾಸ ನೀಡಲಿದ್ದಾರೆ. ಸಂಜೆ 6 ಕ್ಕೆ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದರು.
ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಧಾನ ಕಾರ್ಯದರ್ಶಿ ರವಿ ಕೈಟ್ಕರ್, ಕಾರ್ಯದರ್ಶಿ ಪ್ರದೀಪ ಯಲ್ಲಾಪುರಕರ, ಪ್ರಮುಖರಾದ ಸುಬ್ಬಣ್ಣ ಬೊಳ್ಮನೆ, ರಾಧಾ ಗುಡಿಗಾರ, ರವಿ ಕೈಟ್ಕರ್, ಸೋಮೇಶ್ವರ ನಾಯ್ಕ, ಪ್ರದೀಪ ಯಲ್ಲಾಪುರಕರ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net