ಕಾರ್ಯಕ್ರಮದಲ್ಲಿ ನೌಕಾ ಡಾಕ್‌ಯಾರ್ಡ್ನ ಅಡ್ಮಿರಲ್ ಸೂಪರಿಂಟೆAಡೆAಟ್ ರಿಯರ್ ಅಡ್ಮಿರಲ್ ರವ್ನೀಶ್ ಸೇಠ್, ಜಿಪಂ ಸಿಇಒ ಡಾ. ದಿಲೀಶ್ ಶಶಿ ಇದ್ದರು. ಕರ್ನಾಟಕ ನೌಕಾ ಪ್ರದೇಶದ (ಕೆಎನ್‌ಎ) ನಾಗರಿಕ ಸೇನಾ ಸಹಕಾರವನ್ನು ಬಲಪಡಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಒಪ್ಪಂದದಡಿ ಸ್ಥಳೀಯ ಐಟಿಐ ವಿದ್ಯಾರ್ಥಿಗಳಿಗೆ ನೌಕಾ ಡಾಕ್‌ಯಾರ್ಡ್ನ ಅತ್ಯಾಧುನಿಕ ನಿರ್ವಹಣೆ ಮತ್ತು ಸಹಾಯಕ ವ್ಯವಸ್ಥೆಗಳು, ಆಧುನಿಕ ತಂತ್ರಜ್ಞಾನಗಳು ಹಾಗೂ ಕೈಗಾರಿಕಾ ಕಾರ್ಯವಿಧಾನಗಳ ಕುರಿತು ನೇರ ಪರಿಚಯ ದೊರೆಯಲಿದೆ. ಆ ಮೂಲಕ ಉದ್ಯೋಗಾಧಾರಿತ ಪ್ರಾಯೋಗಿಕ ತರಬೇತಿ ಮತ್ತು ಕಾರ್ಯಸ್ಥಳದಲ್ಲಿಯೇ ಕಲಿಕೆಯ ಅವಕಾಶಗಳನ್ನು ಒದಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.