ಲಕ್ಷ್ಮಣ ಸವದಿ ಉತ್ತರ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವ

ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ
Published on

ಪ್ರಮುಖ ಮುಖ್ಯಾಂಶಗಳು

  • ಮೌನಕ್ಕೆ ಶರಣಾದ ಉತ್ತರ ಕನ್ನಡದ ನಾಯಕರು
ಕಾರವಾರ:

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಸಕ್ಕರೆ ಹಾಗೂ ಸಹಕಾರ ಸಚಿವ ಲಕ್ಷ್ಮಣ ಸವರಿ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ಶಶಿಕಲಾ ಜೊಲ್ಲೆ ಉತ್ತರ ಕನ್ನಡ ಉಸ್ತುವಾರಿ ವಹಿಸಿದ್ದರು. ನಂತರ ಜಿಲ್ಲೆಯ ಶಿವರಾಮ ಹೆಬ್ಬಾರ ಸಚಿವರಾಗಿದ್ದರೂ ಪಕ್ಕದ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉಸ್ತುವಾರಿ ವಹಿಸಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಅವಽಯಲ್ಲಿ ಇದೇ ಮೊದಲ ಬಾರಿಗೆ ಬೇರೆ ಜಿಲ್ಲೆಯವರಿಗೆ ಉಸ್ತುವಾರಿ ವಹಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಯಾವುದೇ ಸಚಿವರಾಗದ ಕಾರಣ ಹೊರ ಜಿಲ್ಲೆಯವರನ್ನು ನೇಮಕ ಮಾಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ಪ್ರಮುಖರಿಂದಲೇ ಅಸಮಾಧಾನ ಕೇಳಿ ಬಂದಿದೆ.

ಮೌನಕ್ಕೆ ಶರಣಾದ ಪದಾಧಿಕಾರಿಗಳು:

ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಅನ್ಯಾಯವಾದ ಬಗ್ಗೆ ಸಾರ್ವಜನಿಕರಿಂದ, ವಿರೋಧ ಪಕ್ಷದವರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೂ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಆದರೆ, ಬಹಿರಂಗವಾಗಿ ಹೆಸರು ಹೇಳಲು ಹೆದರುತ್ತಿದ್ದಾರೆ.

ಲಕ್ಷ್ಮಣ ಸವದಿ ಅವರ ಬಗ್ಗೆ ಮಾಹಿತಿ

ಲಕ್ಷ್ಮಣ ಸವದಿ ಅವರು 2019 ರಿಂದ 2021 ರವರೆಗಿನ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿದ್ದರು. 2023 ರಲ್ಲಿ ಕಾಂಗ್ರೆಸ್ ಸೇರಿ ಅಥಣಿ ಕ್ಷೇತ್ರದಿಂದ ಶಾಸಕರಾಗಿದ್ದಾರೆ.
ಕಾಂಗ್ರೆಸ್ ಸರ್ಕಾರ ಉತ್ತರ ಕನ್ನಡ ಜಿಲ್ಲೆಯ ಶಾಸಕರಿಗೆ, ಕಾರ್ಯಕರ್ತರಿಗೆ ಘೋರ ಅನ್ಯಾಯ ಮಾಡಿದೆ. ವಿರೋಧ ಪಕ್ಷದವರು ಈ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ನಾವು ತಕ್ಷಣ ಪಕ್ಷದ ನಾಯಕರ ವಿರುದ್ಧ ಡಿಸಿಸಿ ಅಧ್ಯಕ್ಷ ಸಾಯಿ ಗಾಂವಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕು. ಅಥವಾ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ನಾಯಕರ ಮನವೊಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ನಮಗೆ ಯಾರೂ ಬೆಲೆ ನೀಡುವುದಿಲ್ಲ.
ಸಮೀರ ನಾಯ್ಕ
ಕಾರವಾರ ಬ್ಲಾಕ್ ಕಾಂಗ್ರೆಸ್ ಮಾಡಿ ಅಧ್ಯಕ್ಷ
......
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net