ಗುಡ್ಡ ಕುಸಿತದಿಂದ ಹೆದ್ದಾರಿಯ ಒಂದು ಭಾಗದ ರಸ್ತೆಯಲ್ಲಿ ಮಣ್ಣು ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಅಧಿಕಾರಿಗಳು ರಸ್ತೆ ಮೇಲೆ ಬಿದ್ದ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ಐಆರ್‌ಬಿ ಕಂಪನಿಯವರು ಹೆದ್ದಾರಿ ಅಗಲೀಕರಣ ಮಾಡುವ ಸಮಯದಲ್ಲಿ ಅವೈಜ್ಞಾನಿಕ ಮಾದರಿಯಲ್ಲಿ ಗುಡ್ಡದ ಮಣ್ಣು ತೆಗೆದಿರುವುದು ಕುಸಿತ ಸಂಭವಿಸಲು ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.