ಜಿಲ್ಲೆಯಲ್ಲಿ ಬ್ಯಾಂಕ್‌ಗಳ ಸಾಲ ಮತ್ತು ಠೇವಣಿ ಅನುಪಾತ ಶೇ.46.6 ಇದ್ದು, ಈ ಪ್ರಮಾಣವು ರಿಸರ್ವ್ ಬ್ಯಾಂಕ್ ಮಾರ್ಗಸೂಚಿಯಂತೆ ಕನಿಷ್ಠ ಶೇ.60 ಇರಬೇಕಾಗಿದೆ. ಬ್ಯಾಂಕ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲಗಳನ್ನು ವಿತರಣೆ ಮಾಡುವಂತೆ ತಿಳಿಸಿದರು. ಅವರು, ವಸತಿ ಹಾಗೂ ಶೈಕ್ಷಣಿಕ ಉದ್ದೇಶ, ಸ್ವ ಉದ್ಯೋಗ ಕೈಗೊಳ್ಳುವವರು, ಸರ್ಕಾರಿ ಯೋಜನೆಗಳ ಫಲಾನುಭವಿಗಳ ಅರ್ಜಿಗಳನ್ನು ತಿರಸ್ಕರಿಸದೇ, ಅರ್ಜಿಗಳಲ್ಲಿನ ದೋಷಗಳನ್ನು ಸರಿಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಸಾಲದ ಅರ್ಜಿಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.