ಸಾಂಸ್ಕೃತಿಕ ಕ್ಷೇತ್ರ(cultural field)ದಲ್ಲೂ ಮಕ್ಕಳು ತೊಡಗಿಕೊಳ್ಳಲಿ

ಶಿರಸಿಯಲ್ಲಿ ಪ್ರತಿಭಾ ಕಾರಂಜಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು. ಈಶ್ವರ ನಾಯ್ಕ, ನಾಗರಾಜ ನಾಯ್ಕ, ಪ್ರತಿಭಾ ನೀಲೇಕಣಿ, ಸ್ಯಯದ್ ಜಾಕೀರ ಇತರರಿದ್ದರು.
ಶಿರಸಿಯಲ್ಲಿ ಪ್ರತಿಭಾ ಕಾರಂಜಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು. ಈಶ್ವರ ನಾಯ್ಕ, ನಾಗರಾಜ ನಾಯ್ಕ, ಪ್ರತಿಭಾ ನೀಲೇಕಣಿ, ಸ್ಯಯದ್ ಜಾಕೀರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
  • ತಾರತಮ್ಯವಿಲ್ಲದೇ ಎಲ್ಲರೂ ಶಿಕ್ಷಣವಂತರಾಗಲಿ
  • ಶಾಸಕ ಭೀಮಣ್ಣ ನಾಯ್ಕ ಚಾಲನೆ
ಶಿರಸಿ: ಪಾಠವೊಂದೇ ಅಲ್ಲ, ಆಟವೂ ವಿದ್ಯಾರ್ಥಿಗಳಿಗೆ ಜೀವನಕ್ಕೆ ಹೊಸ ದಿಕ್ಕನ್ನು ನೀಡುತ್ತದೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಒಳ್ಳೆಯ ಸಂಸ್ಕಾರ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
 ನಗರದ ಶಾಸಕರ ಮಾದರಿ ಶಾಲೆಯಲ್ಲಿ ಶಿರಸಿ ನಗರದ ಪಶ್ಚಿಮ ಸಮೂಹ ಸಂಪನ್ಮೂಲ ಕೇಂದ್ರ ಮತ್ತು ಶಾಸಕರ ಮಾದರಿ ಶಾಲೆಯ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿರಸಿ ನಗರದ ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯಿಂದ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳ್ಳುತ್ತದೆ. ತಾರತಮ್ಯವಿಲ್ಲದೇ ಎಲ್ಲರೂ ಶಿಕ್ಷಣವಂತರಾಗಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರ (cultural field)ದಲ್ಲಿ ತೊಡಗಿಕೊಳ್ಳಬೇಕು ಎಂದರು.
 ಶಾಸಕರ ಮಾದರಿ ಶಾಲೆಗೆ ಅಗತ್ಯವಿರುವ ಹೆಚ್ಚುವರಿ 6 ಕೊಠಡಿಗಳನ್ನು ಮಂಜೂರಿ ಮಾಡಲಾಗಿದ್ದು, ಸದ್ಯದಲ್ಲಿಯೇ ಟೆಂಡರ್ ಆಗಿ ಕಾಮಗಾರಿ ಆರಂಭಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಅವಶ್ಯವಿರುವ ಮೂಲಸೌಕರ್ಯ ಒದಗಿಸಿ, ಶಾಲೆಯನ್ನು ಜಿಲ್ಲೆಯಲ್ಲಿ ಮಾದರಿ ಶಾಲೆಯನ್ನಾಗಿ ರೂಪುಗೊಳಿಸಲು ಪ್ರಯತ್ನಿಸಲಾಗುತ್ತದೆ ಎಂದರು.
ಎಸ್‌ಡಿಎಂಸಿ ಉಪಾಧ್ಯಕ್ಷ ಈಶ್ವರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬಿಇಒ ನಾಗರಾಜ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ದಿನೇಶ ಶೇಟ್, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಚಂದ್ರಶೇಖರ ಭಟ್ಟ, ಶಿಕ್ಷಣ ಸಂಯೋಜಕಿ ಪ್ರತಿಭಾ ನಿಲೇಕಣಿ, ಬಿಆರ್‌ಪಿ ಸಂಧ್ಯಾ ಭಟ್ಟ, ಸಿಆರ್‌ಪಿ ಸಯ್ಯದ್ ಜಾಕೀರ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯಾಧ್ಯಾಪಕಿ ಪ್ರಮಿಳಾ ಪೈ ಹಾಗೂ ಶಿಕ್ಷಕ ನಾಗರಾಜ ಹೆಗಡೆ ನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net